ಶ್ರೀ ಮಹದೇಶ್ವರ ಪ್ರೌಢಶಾಲೆ ಮಕ್ಕಳ ಸಾಧನೆ

ಹನೂರಿನ ಶ್ರೀ ಮಲೆಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಜಯಗಳಿಸಿದ ಮಲೆಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ದೈಹಿಕ ಶಿಕ್ಷಣ ಪರಿವೀಕ್ಷಕ  ಚಂದ್ರಶೇಖರ್, ದೈಹಿಕ ಶಿಕ್ಷಣ ಶಿಕ್ಷಕರಾದ ಧನರಾಜ್, ಶಂಭಯ್ಯ ರವಿ ಇದ್ದರು
ಹನೂರಿನ ಶ್ರೀ ಮಲೆಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಜಯಗಳಿಸಿದ ಮಲೆಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ದೈಹಿಕ ಶಿಕ್ಷಣ ಪರಿವೀಕ್ಷಕ ಚಂದ್ರಶೇಖರ್, ದೈಹಿಕ ಶಿಕ್ಷಣ ಶಿಕ್ಷಕರಾದ ಧನರಾಜ್, ಶಂಭಯ್ಯ ರವಿ ಇದ್ದರು
Published on

ಪ್ರಮುಖ ಮುಖ್ಯಾಂಶಗಳು

  • ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿದ ವಿದ್ಯಾರ್ಥಿಗಳು
  • ಸಾಲೂರು ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿನಂದನೆ
ಹನೂರು: ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಲೆಮಹದೇಶ್ವರ ಬೆಟ್ಟದ ಶ್ರೀ ಮಲೆಮಹದೇಶ್ವರ ಸ್ವಾಮಿ ಕೃಪಾ ಎಜುಕೇಷನ್ ಸೊಸೈಟಿಯ ವಿವಿಧ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿ ಈ ಬಾರಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಪ್ರೌಢಶಾಲೆ ವಿದ್ಯಾರ್ಥಿಗಳು ಖೋ, ಖೋ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ಪ್ರಥಮ ಸ್ಥಾನ, ಬಾಲಕರ ಬ್ಯಾಡ್ಮಿಂಟನ್‌ನಲ್ಲಿ ದ್ವಿತೀಯ ಸ್ಥಾನ ಹಾಗೂ ಎತ್ತರ ಜಿಗಿತದಲ್ಲಿ ರೀನಾ ಪ್ರಥಮ ಸ್ಥಾನ ಪಡೆದಿದ್ದಾರೆ.
ತಾಲೂಕಿನ ಒಡೆಯರಪಾಳ್ಯ ಶ್ರೀ ಮಹದೇಶ್ವರ ಪ್ರೌಢಶಾಲೆಯ ಬಾಲಕ, ಬಾಲಕಿಯರ ತಂಡ ಕಬಡ್ಡಿಯಲ್ಲಿ ಪ್ರಥಮ ಸ್ಥಾನ, ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಬಾಲಕಿಯರ ತಂಡ ಪ್ರಥಮ ಹಾಗೂ ವಾಲಿಬಾಲ್‌ನಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿದೆ. 800 ಮೀಟರ್ ಓಟದ ಸ್ಪರ್ಧೆಯಲ್ಲಿ ಆರ್.ಸಿಂಚನಾ, 200 ಮೀಟರ್ ಓಟದಲ್ಲಿ ಎಸ್.ವರ್ಷಾ, 100 ಮೀಟರ್ ಓಟದಲ್ಲಿ ಆರ್. ದೀಕ್ಷಿತ್, 3,000 ಮೀಟರ್ ಓಟದಲ್ಲಿ ಸ್ನೇಹಾ ತೃತೀಯ ಸ್ಥಾನ ಹಾಗೂ 4*400 ರಿಲೆಯಲ್ಲಿ ಸ್ನೇಹ ತಂಡ ದ್ವಿತೀಯ ಸ್ಥಾನ ಪಡೆದರೆ, ಎತ್ತರ ಜಿಗಿತದಲ್ಲಿ ಸ್ನೇಹಾ ಪ್ರಥಮ ಸ್ಥಾನ ಪಡೆದಿದ್ದಾರೆ.
ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ಬಾಲಕರ ತಂಡ ಪ್ರಥಮ ಸ್ಥಾನ ಪಡೆದಿದೆ. ಇದರಿಂದ ಸಂಸ್ಥೆಯ ವಿವಿಧ ಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವುದರ ಮೂಲಕ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳು ಹಾಗೂ ಅಗತ್ಯ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿನಂದಿಸಿದ್ದಾರೆ.
ವಿಜಯವಾಣಿಯೊಂದಿಗೆ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಶ್ರೀಮಠವು ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯದೊಂದಿಗೆ ಶಿಕ್ಷಣ ಸಂಸ್ಥೆಗಳನ್ನು ತೆರೆದು ಗುಡ್ಡಗಾಡು ಪ್ರದೇಶದ ಬಡ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುತ್ತ ಬಂದಿದೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ, ಮಾಲ್ಯವರ್ಧನೆಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಭವಿಷ್ಯದ ಬುನಾದಿಗೆ ದೂರದೃಷ್ಟಿ ಹೊಂದಲಾಗಿದೆ. ಜತೆಗೆ ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಶಿಕ್ಷಕರಿಂದ ಅಗತ್ಯ ತರಬೇತಿ ನೀಡಲಾಗುತ್ತಿದೆ. ಇದರ ಪರಿಣಾಮ ಸಂಸ್ಥೆಯ ವಿದ್ಯಾರ್ಥಿಗಳು ಈ ಬಾರಿ ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸಿ ಜಯಗಳಿಸಿರುವುದು ಹೆಮ್ಮೆಯ ವಿಷಯ. ಮುಂದಿನ ದಿನಗಳಲ್ಲಿ ನಡೆಯುವ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲೂ ಜಯಗಳಿಸುವಂತಾಗಬೇಕು ಎಂದು ಆಶಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net