ನಿಯಮ ಉಲ್ಲಂಘಿಸುವ ಟಿಪ್ಪರ್ ಮಾಲೀಕರ ವಿರುದ್ಧ ಕ್ರಮ

ತಾಲೂಕಿನ ಚಿಕ್ಕತುಪ್ಪೂರು ಗೇಟ್ ಸಮೀಪ 17ರಂದು ಟಿಪ್ಪರ್ ಡಿಕ್ಕಿಯಾಗಿ ಟೆಂಪೋದಲ್ಲಿದ್ದ ಶಾಲಾ ಮಕ್ಕಳಿಗೆ ಪೆಟ್ಟುಬಿದ್ದು ಆಸ್ಪತ್ರೆಗೆ ದಾಖಲಾಗಿರುವ ವಿಚಾರವಾಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.
ತಾಲೂಕಿನ ಚಿಕ್ಕತುಪ್ಪೂರು ಗೇಟ್ ಸಮೀಪ 17ರಂದು ಟಿಪ್ಪರ್ ಡಿಕ್ಕಿಯಾಗಿ ಟೆಂಪೋದಲ್ಲಿದ್ದ ಶಾಲಾ ಮಕ್ಕಳಿಗೆ ಪೆಟ್ಟುಬಿದ್ದು ಆಸ್ಪತ್ರೆಗೆ ದಾಖಲಾಗಿರುವ ವಿಚಾರವಾಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಎಚ್ಚರಿಕೆ
ಗುಂಡ್ಲುಪೇಟೆ: ಮುಂದಿನ 15 ದಿನಗಳ ಕಾಲ ಟಿಪ್ಪರ್ ಸಂಚಾರವನ್ನು ನಿರ್ಬಂಧಿಸಿ ಇಲಾಖೆಯ ನಿಯಮಗಳನ್ನು ಉಲ್ಲಂಘಿಸುವ ಟಿಪ್ಪರ್ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ತಿಳಿಸಿದರು.
ತಾಲೂಕಿನ ಚಿಕ್ಕತುಪ್ಪೂರು ಗೇಟ್ ಸಮೀಪ 17ರಂದು ಟಿಪ್ಪರ್ ಡಿಕ್ಕಿಯಾಗಿ ಟೆಂಪೋದಲ್ಲಿದ್ದ ಶಾಲಾ ಮಕ್ಕಳಿಗೆ ಪೆಟ್ಟುಬಿದ್ದು ಆಸ್ಪತ್ರೆಗೆ ದಾಖಲಾಗಿರುವ ವಿಚಾರವಾಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.
ಸ್ಥಳೀಯ ಗಣಿಗಾರಿಕೆಯಿಂದ ಕಲ್ಲು ಸಾಗಿಸುವ ಟಿಪ್ಪರ್‌ಗಳು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ರಾಜಧನ ಪಾವತಿಸಿ ಅನುಮತಿ ಪಡೆದಿರುತ್ತವೆ. ಆದರೆ ಕೇರಳದಿಂದ ಬರುವ ಲಾರಿಗಳು ನಿಯಮ ಪಾಲನೆ ಮಾಡದೆ ಸಂಚರಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿದೆ. ಇಂಥಾ ಪ್ರಕರಣಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಅವುಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಲಾಗುವುದು ಎಂದು ತಿಳಿಸಿದರು.
ಕೇರಳ ಟಿಪ್ಪರ್ ಲಾರಿಗಳ ಸಂಚಾರ ಸಂಬಂಧವಾಗಿ ಜಿಲ್ಲಾಧಿಕಾರಿ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ನೆರೆ ರಾಜ್ಯಗಳಿಗೆ ಕಲ್ಲು ಸಾಗಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ರಮ ದಂಧೆಕೋರರು ಹಾಗೂ ಅವರಿಗೆ ಸಹಕಾರ ನೀಡುವವರನ್ನು ರಕ್ಷಿಣೆ ಮಾಡುವ ಪ್ರಶ್ನೆಯೇ ಇಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರಕ್ಕೆ ಪ್ರತಿನಿತ್ಯ ಲಕ್ಷಾಂತರ ರೂ. ವಂಚನೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಗಡಿಭಾಗದಲ್ಲಿ ಅನಧಿಕೃತವಾಗಿ ಸಂಚರಿಸುವ ಟಿಪ್ಪರ್‌ಗಳನ್ನು ಜಪ್ತಿ ಮಾಡಿ ಕ್ರಮ ಕೈಗೊಳ್ಳಲು ಸೂಚನೆ ನೀಡುತ್ತೇನೆ ಎಂದರು.
ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಪಂ ಮಾಜಿ ಸದಸ್ಯರಾದ ಕೆ.ಎಸ್.ಮಹೇಶ್, ಕೆರೆಹಳ್ಳಿ ನವೀನ್, ಪುರಸಭೆ ಮಾಜಿ ಅಧ್ಯಕ್ಷ ಜಿ.ಎಸ್.ಮಧುಸೂಧನ್, ಮಾಜಿ ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ, ಮಾಜಿ ಸದಸ್ಯ ಸುರೇಶ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್, ಮುಖಂಡರಾದ ರಘು, ಜಿ.ಕೆ.ಲೋಕೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net