ರಾಮಾಪುರ ಪೊಲೀಸ್ ಠಾಣೆ ಸಂರಕ್ಷಣೆಗೆ ಕ್ರಮ

ರಾಮಾಪುರ ಪೊಲೀಸ್ ಠಾಣೆಯ ಹಳೇ ಕಟ್ಟಡಕ್ಕೆ ಎಸ್ಪಿ ಮುತ್ತುರಾಜು ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕರಾಜಶೆಟ್ಟಿ, ಮಂಜುನಾಥ್ ಪ್ರಸಾದ್ ಇತರರಿದ್ದರು.
ರಾಮಾಪುರ ಪೊಲೀಸ್ ಠಾಣೆಯ ಹಳೇ ಕಟ್ಟಡಕ್ಕೆ ಎಸ್ಪಿ ಮುತ್ತುರಾಜು ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕರಾಜಶೆಟ್ಟಿ, ಮಂಜುನಾಥ್ ಪ್ರಸಾದ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Ramapura Police Station
ಹನೂರು: ರಿಪೇರಿ ಕಾರ್ಯವನ್ನು ಕೈಗೊಳ್ಳುವುದರ ಮೂಲಕ ರಾಮಾಪುರ ಹಳೆಯ ಪೊಲೀಸ್ ಠಾಣೆ ಕಟ್ಟಡವನ್ನು ಸಂರಕ್ಷಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ತಿಳಿಸಿದರು.
ವೀರಪ್ಪನ್ ದಾಳಿಗೆ ಒಳಗಾಗಿದ್ದ ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯ ಹಳೆಯ ಕಟ್ಟಡಕ್ಕೆ ಸೋಮವಾರ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲಿಸಿ ಮಾತನಾಡಿದರು.
ವೀರಪ್ಪನ್ ದಾಳಿಗೆ ತುತ್ತಾಗಿದ್ದ ಈ ಹಳೇ ಪೊಲೀಸ್ ಠಾಣೆಯಲ್ಲಿ ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸಿದ್ದು, ನೆನಪಿನಲ್ಲಿ ಉಳಿಯುವಂತಾಗಿದೆ. ಹಾಗಾಗಿ ಈ ಕಟ್ಟಡವನ್ನು ಸಂರಕ್ಷಿಸಬೇಕಾದದು ಅಗತ್ಯ. ಆದ್ದರಿಂದ ಅಗತ್ಯ ರಿಪೇರಿ ಕಾರ್ಯ ಕೈಗೊಳ್ಳುವ ಬಗ್ಗೆ ಹಾಗೂ ಆವರಣದಲ್ಲಿ ಸ್ವಚ್ಛತೆಗೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸ್ಮಾರಕ ನಿರ್ಮಾಣ ಸಂಬಂಧ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುನ್ನ ಠಾಣೆಗೆ ಭೇಟಿ ನೀಡಿದ ಎಸ್ಪಿ ಅವರು, ಠಾಣಾ ಕಾರ್ಯ ವೈಖರಿಯನ್ನು ಪರಿಶೀಲಿಸಿದರು. ತನಿಖೆಯಲ್ಲಿರುವ ಪ್ರಕರಣಗಳ ಬಗ್ಗೆ ಪರಾಮರ್ಶೆ ನಡೆಸಿ ಶೀಘ್ರ ವಿಲೇವಾರಿ ಸಂಬಂಧ ಅಗತ್ಯ ಸಲಹೆ, ಸೂಚನೆಯನ್ನು ನೀಡಿದರು. ಮಿಣ್ಯಂ ಸಮೀಪದ ಬೂದಿಕೆರೆ ತಿರುವಿನಲ್ಲಿ ವೀರಪ್ಪನ್ ದಾಳಿಯಿಂದ ಮೃತಪಟ್ಟ ಸ್ಥಳದಲ್ಲಿ ನಿರ್ಮಿಸಿರುವ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ತೆರಳಿ ಪರಿಶೀಲಿಸಿದರು. ಮಿಣ್ಯಂ ಹಾಗೂ ಹೂಗ್ಯಂ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್ ಚಿಕ್ಕರಾಜಶೆಟ್ಟಿ, ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್ ಹಾಗೂ ಇನ್ನಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net