ಬರ ೋಷಣೆ, ರೈತರ ಸಾಲ ಮನ್ನಾ ಮಾಡಿರಿ

ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ೋಷಣೆ ಮಾಡಲು ಒತ್ತಾಯಿಸಿದರು. ಗೌಡೇಗೌಡ, ಮಹದೇವಪ್ರಸಾದ್, ಮಹದೇವಪ್ಪ, ಕುಮಾರಸ್ವಾಮಿ, ದಿಲೀಪ್ ಇತರರಿದ್ದರು.
ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ೋಷಣೆ ಮಾಡಲು ಒತ್ತಾಯಿಸಿದರು. ಗೌಡೇಗೌಡ, ಮಹದೇವಪ್ರಸಾದ್, ಮಹದೇವಪ್ಪ, ಕುಮಾರಸ್ವಾಮಿ, ದಿಲೀಪ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಒತ್ತಾಯ
  • ಗುಂಡ್ಲುಪೇಟೆಯಿಂದ ಚಾಮರಾಜನಗರಕ್ಕೆ ಪಾದಯಾತ್ರೆ ಮಾಡಿದ ಅನ್ನದಾತರು

ಚಾಮರಾಜನಗರ:

ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ೋಷಣೆ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಮತ್ತು ಕೆರೆಗಳಿಗೆ ನೀರು ತುಂಬಿಸಬೇಕೆಂದು ಒತ್ತಾಯಿಸಿ ಗುಂಡ್ಲುಪೇಟೆಯಿಂದ ಪಾದಯಾತ್ರೆ ಶುರು ಮಾಡಿದ ರೈತರು ಸೋಮವಾರ ಚಾಮರಾಜನಗರದ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಖಾಲಿ ಬಿಂದಿಗೆ ತೋರಿಸಿ ಆಕ್ರೋಶ ವ್ಯಕ್ತಪಡಿಸಿದರು. ಬರಗಾಲ ಪರಿಸ್ಥಿತಿಯ ಅಸಮರ್ಪಕ ನಿರ್ವಹಣೆ ಮಾಡಲಾಗುತ್ತಿದೆ. ಜಾನುವಾರುಗಳಿಗೆ ಮೇವಿಲ್ಲ. ಗಾಂಧಿ ಗ್ರಾಮ ಏತ ನೀರಾವರಿಯಿಂದ ಕಮರಹಳ್ಳಿ, ಅಗತಗೌಡನಹಳ್ಳಿ, ರಾಘವಾಪುರ, ಮಳವಳ್ಳಿ ಭಾಗದ ಕೆರೆಗಳಿಗೆ ತಕ್ಷಣ ನೀರು ತುಂಬಿಸಬೇಕು. ಆಲಂಬೂರು ಏತ ನೀರಾವರಿಯಿಂದ ಉತ್ತೂರು, ವಡ್ಡಗೆರೆಯಿಂದ ಬೊಮ್ಮನಹಳ್ಳಿ ಸೇರಿದಂತೆ ಗುಂಡ್ಲುಪೇಟೆ ತಾಲೂಕಿನ ಎಲ್ಲ ಕೆರೆಗಳನ್ನು ತುಂಬಿಸಬೇಕು ಎಂದು ಆಗ್ರಹಿಸಿದರು.
ಗುಂಡ್ಲುಪೇಟೆ ತಾಲೂಕಿಗೆ 110 ಕೆಎರಗಳ ಯೋಜನೆ ಡಿಪಿಆರ್ ಆಗಿ ಗುದ್ದಲಿಪೂಜೆ ಮಾಡಲಾಗಿದೆ. ಈ ಕಾಮಗಾರಿಯನ್ನು ತಕ್ಷಣ ಜಾರಿಗೆ ತರಬೇಕು. ಹನೂರು ತಾಲೂಕಿನಲ್ಲಿ 490 ಕೋಟಿ ರೂ.ವೆಚ್ಚದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸಭೆಕು. ಗುಂಡ್ಲುಪೇಟೆ ತಾಲೂಕಿನ ಜಾನುವಾರುಗಳಿಗೆ ಉಚಿತವಾಗಿ ಮೇವು ವಿತರಣೆಮ ಮಾಡಬೇಕು. ಅತಿಯಾದ ಟಿಪ್ಪರ್‌ಗಳ ಹಾವಳಿಯಿಂದ ರಸ್ತೆಗಳು ಗುಂಡಿಬಿದ್ದಿದ್ದು, ರಿಪೇರಿ ಕಾರ್ಯವನ್ನು ಬೇಗ ಮಾಡಿಸಬೇಕು. ಅಪಘಾತಗಳಿಗೆ ಕಡಿವಾಣ ಹಾಕಬೇಕು. ಹಂಗಳ ಹೋಬಳಿ ಕೇಂದ್ರದಲ್ಲಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಿ ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಗೌಡೇಗೌಡ, ಪ್ರಧಾನ ಕಾರ್ಯದರ್ಶಿ ಮಹದೇವಪ್ರಸಾದ್, ಕಾರ್ಯಾಧ್ಯಕ್ಷ ಮಹದೇವಪ್ಪ, ಸಂಘಟನಾ ಕಾರ್ಯದರ್ಶಿ ಕುಮಾರಸ್ವಾಮಿ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ದಿಲೀಪ್, ಪ್ರಧಾನ ಕಾರ್ಯದರ್ಶಿ ಬೊಮ್ಮನಹಳ್ಳಿ ಲೋಕೇಶ್, ಕೊಡಗು ಅಧ್ಯಕ್ಷ ಮನಸೋಮಯ್ಯ, ಮೈಸೂರು ಅಧ್ಯಕ್ಷ ವಿಜಯೇಂದ್ರ, ಚಾಮರಾಜನಗರ ಮಹಿಳಾ ಘಟಕದ ಅಧ್ಯಕ್ಷೆ ರಾಜಮಣಿ, ಬುಲೆಟ್ ಮಹೇಶಣ್ಣ, ಲಕ್ಷ್ಮಮ್ಮ, ಹೊನ್ನೇಗೌಡನಹಳ್ಳಿ ಶಿವಮಲ್ಲು, ಜಗದೀಶ್ ಮತ್ತು ಇತರರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net