ಆತ್ಮಸ್ಥೈರ್ಯ ವೃದ್ಧಿಗೆ ಸಾಹಸ ಕ್ರೀಡೆಗಳು ಸಹಕಾರಿ

ಚಾಮರಾಜನಗರದ ಹೊರವಲಯದಲ್ಲಿರುವ ಕರಿವರದರಾಜಸ್ವಾಮಿ ಬೆಟ್ಟದಲ್ಲಿ ಆಯೋಜಿಸಿದ್ದ  ಜಿಲ್ಲಾ ಮಟ್ಟದ ಚಾರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಗಣ್ಯರು ಪ್ರಮಾಣ ಪತ್ರ ವಿತರಿಸಿದರು. ಮಹಮ್ಮದ್ ಅಸ್ಗರ್ ಮುನ್ನಾ, ವಿ.ಶ್ರೀನಿವಾಸ ಪ್ರಸಾದ್, ಕೆ.ಸುರೇಶ್, ಡಾ.ಪ್ರಕಾಶ್, ನಜೀವುಲ್ಲಾ ಷರೀಫ್, ಡಾ.ಶ್ರೀನಿವಾಸ್, ಸುರೇಶ್‌ಕುಮಾರ್, ಮಹದೇವಸ್ವಾಮಿ ಇನ್ನಿತರರಿದ್ದರು.
ಚಾಮರಾಜನಗರದ ಹೊರವಲಯದಲ್ಲಿರುವ ಕರಿವರದರಾಜಸ್ವಾಮಿ ಬೆಟ್ಟದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚಾರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಗಣ್ಯರು ಪ್ರಮಾಣ ಪತ್ರ ವಿತರಿಸಿದರು. ಮಹಮ್ಮದ್ ಅಸ್ಗರ್ ಮುನ್ನಾ, ವಿ.ಶ್ರೀನಿವಾಸ ಪ್ರಸಾದ್, ಕೆ.ಸುರೇಶ್, ಡಾ.ಪ್ರಕಾಶ್, ನಜೀವುಲ್ಲಾ ಷರೀಫ್, ಡಾ.ಶ್ರೀನಿವಾಸ್, ಸುರೇಶ್‌ಕುಮಾರ್, ಮಹದೇವಸ್ವಾಮಿ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಅಭಿಪ್ರಾಯ
  • ಜಿಲ್ಲಾಮಟ್ಟದ ಚಾರಣ ಕಾರ್ಯಕ್ರಮ
  • ಭಾಗವಹಿಸಿದವರಿಗೆ ಪ್ರಮಾಣ ಪತ್ರ ವಿತರಣೆ
ಚಾಮರಾಜನಗರ: ಯುವಕ-ಯುವತಿಯರು ಆತ್ಮಸ್ಥೈರ್ಯ ವೃದ್ಧಿಸಿಕೊಳ್ಳಲು ಸಾಹಸ ಕ್ರೀಡೆಗಳು ಅತ್ಯಂತ ಸಹಕಾರಿಯಾಗಿದೆ ಎಂದು ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಕರಿವರದರಾಜಸ್ವಾಮಿ ಬೆಟ್ಟದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಯುವಕ, ಯುವತಿಯರನ್ನು ಸಾಹಸ ಚಟುವಟಿಕೆಗಳಲ್ಲಿ ಉತ್ತೇಜಿಸುವ ಸಲುವಾಗಿ ಗುರುವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಚಾರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳ ತೆಗೆ ಹೆಚ್ಚಾಗಿ ಸಾಹಸ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಯುವಜನರು ಕ್ರೀಡಾ ಇಲಾಖೆ ಆಯೋಜಿಸುವ ಗುಡ್ಡಗಾಡು ಓಟ, ಚಾರಣ, ಜಲಸಾಹಸ ಕ್ರೀಡೆಗಳಲ್ಲಿ ಪಾಲ್ಗೊಂಡು ಆತ್ಮಸ್ಥೈರ್ಯ ವೃದ್ಧಿಸಿಕೊಳ್ಳಬೇಕು. ಅದರಲ್ಲೂ ಯುವತಿಯರು ಜೀವನದಲ್ಲಿ ಎದುರಾಗುವ ಸಂಕಷ್ಟಗಳನ್ನು ಎದುರಿಸಲು ಈ ಸಾಹಸ ಕ್ರೀಡೆಗಳು ನೆರವಾಗಲಿವೆ ಎಂದರು.
ಜಿಲ್ಲಾ ಕ್ರೀಡಾಂಗಣ ಸಲಹಾ ಸಮಿತಿ ಸದಸ್ಯ ಹಾಗೂ ಹಿರಿಯ ಕ್ರೀಡಾಪಟು ವಿ.ಶ್ರೀನಿವಾಸ ಪ್ರಸಾದ್ ಮಾತನಾಡಿ, ಇಂದಿನ ಯುವಕರು ದೇಶದ ಆಸ್ತಿಯಾಗಿದ್ದಾರೆ. ವಿದ್ಯಾರ್ಥಿಗಳು, ಯುವಜನತೆ ಮೊಬೈಲ್‌ಗಳಿಗೆ ದಾಸರಾಗಿ ಹಾಗೂ ಮಾದಕ ವಸ್ತುಗಳಿಗೆ ಬಲಿಯಾಗಿ ತಮ್ಮ ಉತ್ತಮ ಜೀವನವನ್ನು ಕಳೆದುಕೊಳ್ಳಬಾರದು. ನಿರಂತರವಾಗಿ ಸಾಹಸ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಸದೃಢ ಸಮಾಜ ಕಟ್ಟಲು ಮುಂದಾಗಬೇಕು ಎಂದು ತಿಳಿಸಿದರು.
ಚಾರಣ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಚಾಮರಾಜನಗರ ಕೃಷಿ ವಿಶ್ವವಿದ್ಯಾಲಯದ ಹಾಗೂ ಸಂತೇಮರಹಳ್ಳಿಯ ಕ್ರೀಡಾ ಮತ್ತು ಅರ್ಚರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಕೆ.ಸುರೇಶ್, ಚಾಮರಾಜನಗರ ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಪ್ರಕಾಶ್, ಅರಣ್ಯಾಧಿಕಾರಿ ನಜೀವುಲ್ಲಾ ಷರೀಫ್, ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಸುರೇಶ್‌ಕುಮಾರ್, ಪೊಲೀಸ್ ಅಧಿಕಾರಿ ಮಹದೇವಸ್ವಾಮಿ, ಕ್ರೀಡಾ ಇಲಾಖೆಯ ತರಬೇತುದಾರ ಗಣೇಶ್ ಇತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net