ಜ.30, 31 ರಂದು ಸುವರ್ಣಾವತಿಯಲ್ಲಿ ಸಾಹಸ ಕ್ರೀಡೆ

ಚಾಮರಾಜನಗರ ತಾಲೂಕಿನ ಸುವರ್ಣಾವತಿ ಜಲಾಶಯ
ಚಾಮರಾಜನಗರ ತಾಲೂಕಿನ ಸುವರ್ಣಾವತಿ ಜಲಾಶಯ
Published on

ಪ್ರಮುಖ ಮುಖ್ಯಾಂಶಗಳು

  • ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
  • ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜನೆ
  • ಜ.27ರೊಳಗಾಗಿ ಅರ್ಜಿ ಸಲ್ಲಿಸುವಂತೆ ಮನವಿ
ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಸಹಯೋಗದಲ್ಲಿ ತಾಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಜಲ ಸಾಹಸ ಕ್ರೀಡೆಯನ್ನು ಜ.30 ಮತ್ತು 31ರಂದು ಏರ್ಪಡಿಸಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕ, ಯುವತಿಯರು, ಸಾರ್ವಜನಿಕರು ಕ್ರೀಡೆಯಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಜಲ ಸಾಹಸ ಕ್ರೀಡೆಯನ್ನು ಜ.30ರಂದು ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕ, ಯುವತಿಯರಿಗೆ ಹಾಗೂ ಜ.31ರಂದು ಸಾರ್ವಜನಿಕರಿಗೆ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ (ಕೊಠಡಿ ಸಂ.118) ಪಡೆದು ಭರ್ತಿ ಮಾಡಿ ಜ.27ರೊಳಗಾಗಿ ಸಲ್ಲಿಸಬೇಕು.
ಭಾಗವಹಿಸುವ ಅಭ್ಯರ್ಥಿಗಳಿಗೆ ಮಧ್ಯಾಹ್ನದ ಲಘು ಉಪಹಾರದ ವ್ಯವಸ್ಥೆ ಇರುತ್ತದೆ ಹಾಗೂ ಯಾವುದೇ ಪ್ರಯಾಣ ಭತ್ಯೆಯನ್ನು ಇಲಾಖೆ ವತಿಯಿಂದ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net