ಎಐನಿಂದ ಹಲವು ಸವಾಲು, ಅವಕಾಶ ಸೃಷ್ಟಿ

ಗುಂಡ್ಲುಪೇಟೆ ತಾಲೂಕಿನ ಶ್ರೀಮದ್ದಾನೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಎಂ.ಎಸ್.ಕವಿತಾ ಮಾತನಾಡಿದರು. ಡಾ. ಆಂಥೋನಿ ಸ್ಯಾಮ್ಸನ್, ಜೆ. ಸುರೇಂದ್ರ, ಐಕ್ಯೂ ಎಸಿ ಸಂಚಾಲಕ ಆರ್.ಮಹದೇವಸ್ವಾಮಿ, ಸಹ ಪ್ರಾಧ್ಯಾಪಕರಾದ ಅಮೂಲ್ಯ, ಸಂತೋಷ್ ಇದ್ದರು.
ಗುಂಡ್ಲುಪೇಟೆ ತಾಲೂಕಿನ ಶ್ರೀಮದ್ದಾನೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಎಂ.ಎಸ್.ಕವಿತಾ ಮಾತನಾಡಿದರು. ಡಾ. ಆಂಥೋನಿ ಸ್ಯಾಮ್ಸನ್, ಜೆ. ಸುರೇಂದ್ರ, ಐಕ್ಯೂ ಎಸಿ ಸಂಚಾಲಕ ಆರ್.ಮಹದೇವಸ್ವಾಮಿ, ಸಹ ಪ್ರಾಧ್ಯಾಪಕರಾದ ಅಮೂಲ್ಯ, ಸಂತೋಷ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • AI
ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಹಲವಾರು ಸವಾಲು ಹಾಗೂ ಅವಕಾಶಗಳನ್ನು ಕಲ್ಪಿಸುತ್ತಿದೆ ಎಂದು ಪಟ್ಟಣದ ಸರ್ಕಾರಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಆಂಥೋನಿ ಸ್ಯಾಮ್ಸನ್ ತಿಳಿಸಿದರು.
ತಾಲೂಕಿನ ಶ್ರೀಮದ್ದಾನೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಆಯೋಜಿಸಿದ್ದ ವಾಣಿಜ್ಯದಲ್ಲಿ ಕೃತಕ ಬುದ್ಧಿಮತ್ತೆ: ಅವಕಾಶಗಳು, ಸವಾಲುಗಳು ಮತ್ತು ಭವಿಷ್ಯದ ವೃತ್ತಿಗಳು ಎಂಬ ವಿಷಯದ ಮೇಲಿನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಹಾರ, ಹಣಕಾಸು ವಿಶ್ಲೇಷಣೆ, ಮಾರುಕಟ್ಟೆ ತಂತ್ರಗಳು ಮತ್ತು ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಗಳಲ್ಲಿ ಹೇಗೆ ಪರಿಣಾಮ ಬೀರುತ್ತಿದೆ ಎಂಬುದನ್ನು ವಿವರವಾಗಿ ಅಧ್ಯಯನ ಮಾಡಲಾಗಿದೆ. ಇದರ ಜತೆಗೆ ಡೇಟಾ ಗೌಪ್ಯತೆ, ಕೌಶಲ ಕೊರತೆ ಮತ್ತು ನೈತಿಕ ಸಮಸ್ಯೆಗಳಂತಹ ಸವಾಲುಗಳೂ ಇವೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ಎಸ್.ಕವಿತಾ ಮಾತನಾಡಿ, ಆಧುನಿಕ ತಂತ್ರಜ್ಞಾನವನ್ನು ವಾಣಿಜ್ಯ ಶಿಕ್ಷಣದಲ್ಲಿ ಒಳಗೊಳ್ಳುವ ಅಗತ್ಯವಿದೆ. ವಿದ್ಯಾರ್ಥಿಗಳು ಬದಲಾಗುತ್ತಿರುವ ಉದ್ಯೋಗ ಮಾರುಕಟ್ಟೆಗೆ ತಕ್ಕಂತೆ ತಮ್ಮನ್ನು ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ನವೀನ ತಂತ್ರಜ್ಞಾನಗಳನ್ನು ಅರ್ಥಮಾಡಿಕೊಳ್ಳಲು ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಸೃಜನಾತ್ಮಕ ಪ್ರಯೋಗ ಕೈಗೊಳ್ಳಲು ಸಲುವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಜೆ. ಸುರೇಂದ್ರ, ಐಕ್ಯೂ ಎಸಿ ಸಂಚಾಲಕ ಆರ್.ಮಹದೇವಸ್ವಾಮಿ, ಸಹ ಪ್ರಾಧ್ಯಾಪಕರಾದ ಅಮೂಲ್ಯ, ಸಂತೋಷ್ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net