ಚಾಮರಾಜನಗರದ ಸತ್ಯಮಂಗಲ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ಹೋಟೆಲ್ ಮಾಲೀಕರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಎಂ.ನಂದ್ಯಪ್ಪಶೆಟ್ಟಿ ಮಾತನಾಡಿದರು. ಎಸ್.ಪ್ರತಾಪ್, ಶ್ರೀನಿವಾಸರಾವ್, ಸಿ.ಒ.ಪಾಪಣ್ಣ, ಜಿ.ಅಂಕಶೆಟ್ಟಿ, ವಿಜಯ್‌ಕುಲಾಲ್, ಕಾರ್ತಿಕ್ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಸಾರಿಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ
ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಎಂ.ನಂದ್ಯಪ್ಪಶೆಟ್ಟಿ ಅಭಿಪ್ರಾಯ
ಹೋಟೆಲ್‌ಗಳಿಂದ ಪ್ರವಾಸಿಗರಿಗೆ ಉತ್ತಮ ಸೇವೆ
ಚಾಮರಾಜನಗರ: ರಾಜ್ಯಸರ್ಕಾರ ಗುಂಡ್ಲುಪೇಟೆ ತಾಲೂಕಿನ ಬಂಡಿಪುರದಲ್ಲಿ ಸಫಾರಿಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಎಂ.ನಂದ್ಯಪ್ಪಶೆಟ್ಟಿ ತಿಳಿಸಿದರು.
ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಎರಡು ಹುಲಿ ಸಂರಕ್ಷಿತ ಪ್ರದೇಶವಿದ್ದು, ಪ್ರವಾಸಿಗರ ಸ್ವರ್ಗವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಹೋಟೆಲ್ ಉದ್ಯಮ ಪ್ರವಾಸಿಗರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದೆ. ಈ ಸೇವಾಕ್ಷೇತ್ರವನ್ನು ಸರ್ಕಾರ ಅಗತ್ಯವಸ್ತುಗಳ ಕಾಯ್ದೆಯಡಿ ಸೇರಿಸಬೇಕು ಎಂದು ಆಗ್ರಹಿಸಿದರು.
ಕೆಲವು ದಿನಗಳ ಹಿಂದೆ ಪ್ರವಾಸಿಗರ ಕೊರತೆಯಿಂದ ಎಷ್ಟೋ ಹೋಟೆಲ್‌ಗಳು ನಷ್ಟ ಅನುಭವಿಸಿದವು. ಹೋಟೆಲ್ ಮಾಲೀಕರ ಸಂಘದ ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ ಪರಿಣಾಮ, ಗುಂಡ್ಲುಪೇಟೆ ತಾಲೂಕಿನ ಬಂಡಿಪುರದಲ್ಲಿ ಸಫಾರಿಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ. ಜಿಲ್ಲೆಯ ಹೋಟೆಲ್ ಉದ್ಯಮಿಗಳು ಎದುರಿಸುತ್ತಿರುವ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘ ಸದಾಕಾಲವೂ ನೆರವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಎಸ್.ಪ್ರತಾಪ್, ಉಪಾಧ್ಯಕ್ಷ ಶ್ರೀನಿವಾಸರಾವ್, ಸಿ.ಒ.ಪಾಪಣ್ಣ, ಜಂಟಿ ಕಾರ್ಯದರ್ಶಿ ಜಿ.ಅಂಕಶೆಟ್ಟಿ, ಖಜಾಂಚಿ ವಿಜಯ್‌ಕುಲಾಲ್, ಕಾರ್ತಿಕ್, ಜಯಕುಮಾರ್ ಹಾಗೂ ಇತರರು ಹಾಜರಿದ್ದರು.