ಚಾಮರಾಜನಗರ ತಾಲೂಕಿನ ಮರಿಯಾಲ ಗ್ರಾಮದ ಶ್ರೀಮುರುಘರಾಜೇಂದ್ರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶ್ರೀಇಮ್ಮಡಿ ಮುರುಘರಾಜೇಂದ್ರಸ್ವಾಮೀಜಿ, ಪಿ.ಮಹದೇವಸ್ವಾಮಿ, ಜಿ.ಕುಮಾರಸ್ವಾಮಿ, ಕೆ.ಜಿ ನಾಗೇದ್ರ, ಅಶೋಕ್ ಇನ್ನಿತರರಿದ್ದರು.
ಚಾಮರಾಜನಗರ: ಶಿಕ್ಷಣದ ಜತೆಜತೆಗೆ ವಿದ್ಯಾರ್ಥಿಗಳು ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಮೈಗೊಡಿಸಿಕೊಂಡು ಸಾಗಬೇಕಿದೆ ಎಂದು ಮರಿಯಾಲ ಮಠದ ಶ್ರೀಇಮ್ಮಡಿ ಮುರುಘರಾಜೇಂದ್ರಸ್ವಾಮೀಜಿ ಸಲಹೆ ನೀಡಿದರು.
ತಾಲೂಕಿನ ಮರಿಯಾಲ ಗ್ರಾಮದ ಶ್ರೀಮುರುಘರಾಜೇಂದ್ರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ 2025-26 ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕಲಿಕೆಯ ಸಂದರ್ಭದಲ್ಲಿ ನಮ್ಮ ಸಂಸ್ಕೃತಿ,ಸಂಸ್ಕಾರವನ್ನು ಮೈಗೂಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ಸ್ಥಾನವನ್ನು ಪಡೆಯುವ ಮೂಲಕ ಜೀವನದಲ್ಲಿ ಎದುರಾಗುವ ಅಡೆತಡೆಗಳನ್ನು ಮೀರಿ ಬೆಳೆಯಬಹುದಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಕಲಿಯುವ ಹಂತದಲ್ಲಿ ಉತ್ತಮವಾಗಿ ಕಲಿಯುವುದರ ತೆಗೆ ಉತ್ತಮ ಫಲಿತಾಂಶ ಪಡೆಯಬೇಕು. ತಂದೆ, ತಾಯಿ, ಗುರುಗಳು ಹಾಗೂ ವಿದ್ಯಾಸಂಸ್ಥೆಯ ಕೀರ್ತಿಯನ್ನು ಇಮ್ಮಡಿಗೊಳಿಸಬೇಕು ಎಂದರು.
ಪ್ರಾಂಶುಪಾಲ ಪಿ.ಮಹದೇವಸ್ವಾಮಿ ಮಾತನಾಡಿ, 2023-24 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದಿದ್ದು , 2024-25 ನೇ ಸಾಲಿನಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೆ.ಪಿ ಪ್ರಭಾಮಣಿ 600 ಕ್ಕೆ 590 ಅಂಕ ಪಡೆದು ಇಡೀ ಜಿಲ್ಲೆಯಲ್ಲೇ ಅತಿ ಹೆಚ್ಚು ಅಂಕ ಪಡೆದು ಕಾಲೇಜಿನ ಕೀರ್ತಿಯನ್ನು ಇಮ್ಮಡಿಗೊಳಿಸಿದ್ದಾಳೆ. 2025-26 ನೇ ಸಾಲಿನಲ್ಲಿ ಶೇ.100 ರಷ್ಟು ಫಲಿತಾಂಶ ನೀಡುವುದರ ಮೂಲಕ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದರು.
ಕಾರ್ಯಕ್ರಮದಲ್ಲಿ ಶ್ರೀಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜಿ.ಕುಮಾರಸ್ವಾಮಿ, ಸಂಸ್ಕೃತ ಪಾಠಶಾಲಾ ಮುಖ್ಯಶಿಕ್ಷಕ ಕೆ.ಜಿ ನಾಗೇದ್ರ, ಉಪನ್ಯಾಸಕ ಅಶೋಕ್, ವಿದ್ಯಾರ್ಥಿನಿ ತನುಶ್ರೀ, ಮಾನಸ, ಮಂಗಳಾ ಹಾಗೂ ಇತರರು ಹಾಜರಿದ್ದರು.
ಶ್ರೀಮುರುಘರಾಜೇಂದ್ರಸ್ವಾಮಿ ಸಂಯುಕ್ತ ಪದವಿಪೂರ್ವ ಕಾಲೇಜು 2023-24 ನೇ ಸಾಲಿನಲ್ಲಿ ಶೇ.100 ರಷ್ಟು ಲಿತಾಂಶವನ್ನು ಪಡೆದುಕೊಂಡಿದೆ. ಈ ಸಾಲಿನಲ್ಲೂ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು.
ಎಚ್.ಎನ್.ಪುಟ್ಟಗೌರಮ್ಮ, ಉಪನಿರ್ದೇಶಕಿ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಚಾಮರಾಜನಗರ