ಅಂಬೇಡ್ಕರ್ ಪ್ರತಿಮೆ, ಜಯಂತಿಗೆ ಸೀಮಿತ ಸಲ್ಲ

 ಚಾಮರಾಜನಗರದ ಕೆಎಸ್‌ಆರ್‌ಟಿಸಿ ಬಸ್ ಘಟಕದಲ್ಲಿ ಬುಧವಾರ ಆಯೋಜಿಸಿದ್ದ ಬುದ್ಧ, ಬಸವ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಮೈಸೂರು ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಬಿಪಿನ್ ನಾಗರಾಜ್, ತಿ.ನರಸೀಪುರ ನಳಂದ ಬುದ್ಧ ವಿಹಾರದ ಬೋಧಿರತ್ನ ಭಂತೇಜಿ ಮತ್ತಿತರರು ಉದ್ಘಾಟಿಸಿದರು. ಎಸ್.ಪಿ.ನಾಗರಾಜು, ಗೌರಾಂಬ, ಎಸ್.ಬಸವರಾಜು ಇತರರಿದ್ದರು.
ಚಾಮರಾಜನಗರದ ಕೆಎಸ್‌ಆರ್‌ಟಿಸಿ ಬಸ್ ಘಟಕದಲ್ಲಿ ಬುಧವಾರ ಆಯೋಜಿಸಿದ್ದ ಬುದ್ಧ, ಬಸವ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಮೈಸೂರು ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಬಿಪಿನ್ ನಾಗರಾಜ್, ತಿ.ನರಸೀಪುರ ನಳಂದ ಬುದ್ಧ ವಿಹಾರದ ಬೋಧಿರತ್ನ ಭಂತೇಜಿ ಮತ್ತಿತರರು ಉದ್ಘಾಟಿಸಿದರು. ಎಸ್.ಪಿ.ನಾಗರಾಜು, ಗೌರಾಂಬ, ಎಸ್.ಬಸವರಾಜು ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಬಿಪಿನ್ ನಾಗರಾಜ್ ಹೇಳಿಕೆ
  • ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ
ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಪ್ರತಿಮೆಗೆ ಸೀಮಿತವಾಗಿಸದೆ ಅವರ ತತ್ವಾದರ್ಶಗಳನ್ನು ಪಾಲನೆ ಮಾಡಬೇಕು ಎಂದು ಮೈಸೂರು ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಬಿಪಿನ್ ನಾಗರಾಜ್ ತಿಳಿಸಿದರು.
ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ಘಟಕದಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮ ಪರಿಶಿಷ್ಟ ಜಾತಿ/ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬುಧವಾರ ಆಯೋಜಿಸಿದ್ದ ಬುದ್ಧ, ಬಸವ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಭಾಷಣ ಮಾಡಿದರು.
ಅಂಬೇಡ್ಕರ್ ಅವರನ್ನು ಪ್ರತಿಮೆಗೆ ಮತ್ತು ಜಯಂತಿಗಳಿಗೆ ಸೀಮಿತ ಮಾಡಬಾರದು. ಬುದ್ಧ, ಬಸವ ಮತ್ತು ಅಂಬೇಡ್ಕರ್ ಅನುಸರಣೆಯಾಗಬೇಕು. ಬುದ್ಧನನ್ನು ಪೂಜಿಸದೆ ಅನುಸರಣೆ ಮಾಡುತ್ತಿರುವ ರಾಷ್ಟ್ರಗಳು ಅಭಿವೃದ್ಧಿಯಾಗುತ್ತಿವೆ. ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬುಡಮೇಲು ಮಾಡಲು ಹೊರಟ ಸಂದರ್ಭದಲ್ಲಿ ಬುದ್ಧ, ಬಸವ ಮತ್ತು ಅಂಬೇಡ್ಕರ್ ಅನಿವಾರ್ಯವಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ವಕೀಲ ಉಮೇಶ್ ಮಾತನಾಡಿ, ಅಂಬೇಡ್ಕರ್ ಸರ್ವ ಜನಾಂಗದ ನಾಯಕರಾಗಿದ್ದು, ಅವರು ಬರೆದ ಸಂವಿಧಾನ ಎಲ್ಲರಿಗೂ ಆಸರೆಯಾಗಿದೆ ಎಂದು ಹೇಳಿದರು. ಇದೇ ವೇಳೆ ನಿವೃತ್ತ ನೌಕರರಿಗೆ ಸನ್ಮಾನ ಮಾಡಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಪಡೆದ ನೌಕರರ ಮಕ್ಕಳಿಗೆ ಸನ್ಮಾನ ಮಾಡಲಾಯಿತು. ರಕ್ತದಾನ ಶಿಬಿರದಲ್ಲಿ 30 ನೌಕರರು ರಕ್ತದಾನ ಮಾಡಿದರು.
ತಿ.ನರಸೀಪುರ ನಳಂದ ಬುದ್ಧ ವಿಹಾರದ ಬೋಧಿರತ್ನ ಭಂತೇಜಿ ಸಾನ್ನಿಧ್ಯ ವಹಿಸಿದ್ದರು. ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಪಿ.ನಾಗರಾಜು, ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಗೌರಾಂಬ, ಆಡಳಿತಾಧಿಕಾರಿ ಎಸ್.ಬಸವರಾಜು, ಜಾಗೃತಾಧಿಕಾರಿ ಶಿವರಾಜೇಗೌಡ, ಸಂಚಲನಾಧಿಕಾರಿ ಪರಮೇಶ್ವರಪ್ಪ, ಲೆಕ್ಕಾಧಿಕಾರಿ ರುದ್ರಮುನಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net