ಅಂಬಿಗರ ಚೌಡಯ್ಯ ಅವರು ದೋಣಿ ನಡೆಸುವ ಕಾಯಕ ಮಾಡುತ್ತಿದ್ದು, ಬಸವಣ್ಣನವರು ಪ್ರತಿಪಾದಿಸಿದ ಕಾಯಕವೇ ಕೈಲಾಸ ತತ್ವವನ್ನು ಕಾಯಾ, ವಾಚಾ, ಮನಸ ಅನುಸರಿಸುತ್ತಿದ್ದರು. ಅನುಭವ ಮಂಟಪದಲ್ಲಿ ಇದನ್ನು ಮನಗಂಡಿದ್ದ ಬಸವಣ್ಣನವರು ಅಂಬಿಗರ ಚೌಡಯ್ಯ ಅವರನ್ನು ಭವಸಾಗರದ ಹುಟ್ಟನ್ನು ದಾಟಿದವರು ಎಂದು ಸ್ಮರಿಸಿಕೊಳ್ಳುತ್ತಿದ್ದರು. ಅಂಬಿಗರ ಚೌಡಯ್ಯ ಅವರ ಮೌಲ್ಯಯುತ ವಚನಗಳ ಚಿಂತನೆಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.