ಅಕ್ರಮ ಬಿಳಿಕಲ್ಲು ಕ್ವಾರಿಗಳನ್ನು ನಿಲ್ಲಿಸುವಂತೆ ಮನವಿ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಸಲಾಯಿತು. ಕ್ವಾಲಿಟಿ ನವೀನ್, ಮಹೇಂದ್ರ, ಹರೀಶ್ ನಾಯಕ್, ಅವಿನಾಶ್, ಮಂಜು ಇನ್ನಿತರರಿದ್ದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಸಲಾಯಿತು. ಕ್ವಾಲಿಟಿ ನವೀನ್, ಮಹೇಂದ್ರ, ಹರೀಶ್ ನಾಯಕ್, ಅವಿನಾಶ್, ಮಂಜು ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಒತ್ತಾಯ
  • ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಕೆ
  • ತಾಲೂಕಿನ ಬಿಸಲವಾಡಿ ಗ್ರಾಮದ ಸಮೀಪ ನಡೆಯುತ್ತಿರುವ ಗಣಿಗಾರಿಕೆ
ಚಾಮರಾಜನಗರ: ತಾಲೂಕಿನ ಬಿಸಲವಾಡಿ ಗ್ರಾಮದ ಸುತ್ತಮುತ್ತ ಅಕ್ರಮವಾಗಿ ನಡೆಯುತ್ತಿರುವ ಬಿಳಿಕಲ್ಲು ಕ್ವಾರಿಗಳನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಬುಧವಾರ ಮನವಿ ಸಲ್ಲಿಸಲಾಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಸಲಾಯಿತು. ತಾಲೂಕಿನ ಬಿಸಲವಾಡಿ ಗ್ರಾಮದ ಸುತ್ತಮುತ್ತ ಗಣಿ ಮತ್ತು ವಿಜ್ಞಾನ ಇಲಾಖೆ ವತಿಯಿಂದ ಯಾವುದೇ ಪರವಾನಿಗೆಯನ್ನು ಪಡೆದುಕೊಳ್ಳದೇ ಅಕ್ರಮವಾಗಿ ಬಿಳಿಕಲ್ಲು ಕ್ವಾರಿಗಳನ್ನು ನಡೆಸುತ್ತಿದ್ದಾರೆ. ಈ ಕ್ವಾರಿಗಳಲ್ಲಿ ನಿತ್ಯವೂ ರಾತ್ರಿಯ ವೇಳೆಯಲ್ಲಿ ಸಿಡಿಮದ್ದುಗಳನ್ನು ಸಿಡಿಸುತ್ತಿದ್ದು, ಪರಿಣಾಮವಾಗಿ ಗ್ರಾಮದ ಹಲವಾರು ಮನೆಗಳು ಬಿರುಕು ಬಿಡುತ್ತಿವೆ ಎಂದು ಆರೋಪಿಸಿದರು.
ಈ ಕ್ವಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಹನಗಳಿಗೂ ಯಾವುದೇ ಸಾರಿಗೆ ಇಲಾಖೆಯ ಪರ್ಮೀಟ್ ಅಥವಾ ಯಾವುದೇ ವಿಮೆಕೂಡ ಇರುವುದಿಲ್ಲ. ಈ ಮೂಲಕ ರಾಜ್ಯದ ಸಂಪತ್ತನ್ನು ಲೂಟಿ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸಿದರೇ, ಸಂಘಟನೆಯ ಕಾರ್ಯಕರ್ತರಿಗೆ ಧಮ್ಕಿ ಹಾಕುವ ವಾತಾವರಣ ಇದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮವಹಿಸಿ, ಅಕ್ರಮ ಕ್ವಾರಿಗಳಿಗೆ ಕಡಿವಾಣ ಹಾಕಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಕ್ವಾಲಿಟಿ ನವೀನ್, ಟೌನ್ ಅಧ್ಯಕ್ಷ ಮಹೇಂದ್ರ, ಕಾರ್ಮಿಕ ಘಟಕದ ಅಧ್ಯಕ್ಷ ಹರೀಶ್ ನಾಯಕ್, ಉಪಾಧ್ಯಕ್ಷ ಅವಿನಾಶ್, ಹರದನಹಳ್ಳಿ ಹೋಬಳಿ ಅಧ್ಯಕ್ಷ ಮಂಜು, ಸಹ ಕಾರ್ಯದರ್ಶಿ ರಾಜೇಂದ್ರ, ಆಫ್ನನ್ ಖಾನ್ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net