ಅರ್ಜಿ ಸಲ್ಲಿಸಿ ನಿವೇಶನ ಸೌಲಭ್ಯ ಪಡೆಯಿರಿ

ಲಕ್ಷ್ಮಯ್ಯನದೊಡ್ಡಿಯಲ್ಲಿ ನಿವೇಶನ ಹಂಚಿಕೆ ಸಂಬಂಧ ಆಯೋಜಿಸಿದ್ದ ವಿಶೇಷ ಗ್ರಾಮಸಭೆಯಲ್ಲಿ ತಾಪಂ ಇಒ ಉಮೇಶ್ ಮಾತನಾಡಿದರು. ಮೂರ್ತಿ, ಆಕಾಶ್, ಮುರುಗೇಶ್, ಮಾಧವನ್, ಪೊನ್ನಮ್ಮ ಇತರರಿದ್ದರು.
ಲಕ್ಷ್ಮಯ್ಯನದೊಡ್ಡಿಯಲ್ಲಿ ನಿವೇಶನ ಹಂಚಿಕೆ ಸಂಬಂಧ ಆಯೋಜಿಸಿದ್ದ ವಿಶೇಷ ಗ್ರಾಮಸಭೆಯಲ್ಲಿ ತಾಪಂ ಇಒ ಉಮೇಶ್ ಮಾತನಾಡಿದರು. ಮೂರ್ತಿ, ಆಕಾಶ್, ಮುರುಗೇಶ್, ಮಾಧವನ್, ಪೊನ್ನಮ್ಮ ಇತರರಿದ್ದರು.
Published on
ಹನೂರು: ಮನೆ ಇಲ್ಲದವರಿಗೆ ಗ್ರಾಮ ಪಂಚಾಯಿತಿ ಮೂಲಕ ನಿವೇಶನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಯನ್ನು ನೀಡಿ ಪ್ರಯೋಜನ ಪಡೆದುಕೊಳ್ಳುವಂತೆ ತಾಲೂಕು ಪಂಚಾಯಿತಿ ಇಒ ಉಮೇಶ್ ತಿಳಿಸಿದರು.
ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮಯ್ಯನದೊಡ್ಡಿ ಗ್ರಾಮದಲ್ಲಿ ಶನಿವಾರ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಸಂಬಂಧ ಆಯೋಜಿಸಿದ್ದ ವಿಶೇಷ ಗ್ರಾಮಸಭೆಯಲ್ಲಿ ಮಾತನಾಡಿದರು.
100ಕ್ಕೂ ಹೆಚ್ಚು ಕುಟುಂಬವಿರುವ ಲಕ್ಷ್ಮಯ್ಯನದೊಡ್ಡಿ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಡುಬಡವರಿದ್ದಾರೆ. ಇಲ್ಲಿ ಕೆಲವರಿಗೆ ಮನೆ ಇಲ್ಲದ ಪರಿಣಾಮ ಒಂದೇ ಕುಟುಂಬದಲ್ಲಿ 2-3 ಕುಟುಂಬಗಳು ವಾಸಿಸುತ್ತಿದ್ದು, ನಿವೇಶನ ನೀಡಬೇಕೆನ್ನುವುದು ಗ್ರಾಮಸ್ಥರ ಒತ್ತಾಯವಾಗಿತ್ತು. ಇದನ್ನು ಮನಗಂಡ ಜಿಲ್ಲಾಧಿಕಾರಿ ಅವರು ಸರ್ಕಾರಿ ಜಾಗವನ್ನು ಗುರುತಿಸುವಂತೆ ಸೂಚಿಸಿದ್ದರು. ಗ್ರಾಮದ ಸರ್ವೇ ನಂ.937/1ರಲ್ಲಿ 4 ಎಕರೆ ಸರ್ಕಾರಿ ಜಾಗವನ್ನು ನಿವೇಶನ ಹಂಚಿಕೆ ಮಾಡಲು ಕಾಯ್ದಿರಿಸಲಾಗಿದ್ದು, 81 ಫಲಾನುಭವಿಗಳಿಗೆ ನೀಡಲಾಗುವುದು. ಅರ್ಹ ಫಲಾನುಭವಿಗಳನ್ನು ಗ್ರಾಮಸಭೆ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಆಯ್ಕೆ ಮಾಡಲಾಗುವುದು. ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆದು ತಾಪಂ ಹಾಗೂ ಜಿಪಂ ಮೂಲಕ ಜಿಲ್ಲಾಧಿಕಾರಿ ಅವರಿಗೆ ಕಳುಹಿಸಲಾಗುವುದು. ಬಳಿಕ ನಿವೇಶನ ಹಂಚಿಕೆಯಾಗಲಿದೆ. ಆದ್ದರಿಂದ ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಯೊಂದಿಗೆ ಗ್ರಾಪಂಗೆ ಅರ್ಜಿ ಸಲ್ಲಿಸಬೇಕು. ಅಧಿಕಾರಿಗಳು ವಾಸಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ನಿವೇಶನ ಹಂಚಿಕೆ ಸಂಬಂಧ ಕ್ರಮ ವಹಿಸಲಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಈಗಾಗಲೇ ಅರ್ಜಿ ಸಲ್ಲಿಸಿರುವ ಕೆಲ ಫಲಾನುಭವಿಗಳ ಪಟ್ಟಿ ಓದಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಪಂ ಆಡಳಿತಾಧಿಕಾರಿ ಮೂರ್ತಿ, ಪಿಡಿಒ ಆಕಾಶ್, ಮುಖಂಡರಾದ ಮುರುಗೇಶ್, ಮಾಧವನ್, ಷಣ್ಮುಗ, ಸರಿತಾ, ರಂಜಿತಾ, ಪವಿತ್ರಾ, ಸುಗುಣಾ, ಪುಷ್ಪಾ, ಪೊನ್ನಮ್ಮ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net