ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವಶಕ್ಕೆ

ಯಳಂದೂರು ಪಟ್ಟಣದ ಬಳೇಪೇಟೆಯಲ್ಲಿ ಗೋಮಾಂಸ ಅಕ್ರಮ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪಪಂ ಅಧಿಕಾರಿಗಳು ಬುಧವಾರ ದಾಳಿ ನಡೆಸಿದರು.
ಯಳಂದೂರು ಪಟ್ಟಣದ ಬಳೇಪೇಟೆಯಲ್ಲಿ ಗೋಮಾಂಸ ಅಕ್ರಮ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪಪಂ ಅಧಿಕಾರಿಗಳು ಬುಧವಾರ ದಾಳಿ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • illegally selling
ಯಳಂದೂರು: ಪಟ್ಟಣದ ಬಳೇಪೇಟೆಯ 9ನೇ ವಾರ್ಡಿನಲ್ಲಿ ಗೋಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಬುಧವಾರ ಪಟ್ಟಣ ಪಂಚಾಯಿತಿ ಅಧಿಕಾರಿಗಳ ತಂಡ ದಾಳಿ ನಡೆಸಿ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.
ಪಟ್ಟಣದ ಬಳೇಪೇಟೆಯಲ್ಲಿ ಗೋಮಾಂಸವನ್ನು ಮಾರಾಟ ಮಾಡಲಾಗುತ್ತಿದೆ ಎಂದು ಮದ್ದೂರು ಗ್ರಾಮದ ಯೋಗೇಶ್ ಎಂಬುವರು ಪಟ್ಟಣ ಪಂಚಾಯಿತಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿ ರಾಘವೇಂದ್ರ ನೇತೃತ್ವದ ತಂಡ ದಾಳಿ ನಡೆಸಿದೆ. ಇಲ್ಲಿಂದ ಮಾಂಸವನ್ನು ವಶಪಡಿಸಿಕೊಂಡು ಇದನ್ನು ಪೌರ ಕಾರ್ಮಿಕರ ನೆರವಿನೊಂದಿಗೆ ಮಣ್ಣಿನಲ್ಲಿ ಹೂತು ಹಾಕಿದ್ದಾರೆ. ಇದನ್ನು ಮಾರಾಟ ಮಾಡುತ್ತಿದ್ದ ನಟರಾಜು ಎಂಬುವರಿಗೆ ಮುಂದೆ ಇದನ್ನು ಮಾರಾಟ ಮಾಡದಂತೆ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯಾಧಿಕಾರಿ ಮಾಹಿತಿ ನೀಡಿದರು.
------
13ವೈಎಲ್‌ಡಿ ಚಿತ್ರ05
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net