ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗಾಗಿ 983 ಬೂತ್ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. 2026ರ ಜೂ.1ಕ್ಕೆ 8,79,752 ಮತದಾರರಿದ್ದು, ವಿಶೇಷ ಸಮಗ್ರ ಪರಿಷ್ಕರಣೆಯು ಎಲ್ಲ ಮತದಾರರನ್ನು ಒಳಗೊಳ್ಳಲಿದೆ. ಈವರೆಗೆ ಜಿಲ್ಲೆಯಲ್ಲಿ ಶೇ. 96.88ರಷ್ಟು ಮತದಾರರನ್ನು ಮ್ಯಾಪಿಂಗ್ ಮಾಡಲಾಗಿದೆ. ಆಯೋಗದ ಮಾರ್ಗಸೂಚಿಗಳಿಗನುಗುಣವಾಗಿ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟರನ್ನು ನೇಮಿಸಲು ಕೋರಲಾಗಿದೆ ಎಂದು ತಿಳಿಸಿದರು.