ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಜಾಥಾ

ಹನೂರಿನ ಕ್ರಿಸ್ತರಾಜ ಶಿಕ್ಷಣ ಸಂಸ್ಥೆ ವತಿಯಿಂದ ಜಾಗೃತಿ ಜಾಥಾ ನಡೆಸುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಸಂಜಯ್‌ಕುಮಾರ್, ಸಿಸ್ಟರ್ ಶೀಲಾ ಮೇರಿ, ಸುಬ್ರಹ್ಮಣ್ಯ ಇತರರಿದ್ದರು.
ಹನೂರಿನ ಕ್ರಿಸ್ತರಾಜ ಶಿಕ್ಷಣ ಸಂಸ್ಥೆ ವತಿಯಿಂದ ಜಾಗೃತಿ ಜಾಥಾ ನಡೆಸುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಸಂಜಯ್‌ಕುಮಾರ್, ಸಿಸ್ಟರ್ ಶೀಲಾ ಮೇರಿ, ಸುಬ್ರಹ್ಮಣ್ಯ ಇತರರಿದ್ದರು.
Published on
ಹನೂರು: ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆ ವತಿಯಿಂದ ಶುಕ್ರವಾರ ಸಾವಿರಾರು ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಸಂಸ್ಥೆಯ ಆವರಣದಿಂದ ನಾಮಫಲಕವನ್ನು ಹಿಡಿದು ಸಾಗಿದ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣದ ಮುಖ್ಯರಸ್ತೆಯಲ್ಲಿ ಘೋಷಣೆಯನ್ನು ಕೂಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಡಾ.ಬಿ.ಆರ್ ಅಂಬೇಡ್ಕರ್ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ ಪ್ರಕೃತಿಯೊಂದಿಗೆ ನಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸೋಣ ಎಂದು ಸಂದೇಶ ನೀಡಿದರು. ಬಳಿಕ ಶಾಲಾ ಆವರಣಕ್ಕೆ ಆಗಮಿಸಿದ ವಿದ್ಯಾರ್ಥಿಗಳು ನೆರೆದಿದ್ದ ಗಣ್ಯರ ಸಮ್ಮುಖದಲ್ಲಿ ಸಸಿ ನೆಟ್ಟು ನಿರೇರೆದು ವಿಶ್ವ ಪರಿಸರ ದಿನವನ್ನು ಆಚರಿಸಿದರು.
ನಂತರ ನಡೆದ ಕಾರ್ಯಕ್ರಮದಲ್ಲಿ ಸಬ್ ಇನ್‌ಸ್ಪೆಕ್ಟರ್ ಸಾಹೇಬಗೌಡ ಮಾತನಾಡಿ, ಮನುಕುಲಕ್ಕೆ ಪರಿಸರ ಉತ್ತಮ ಕೊಡುಗೆಯನ್ನು ನೀಡಿದೆ. ಇದನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಬ್ದಾರಿಯಾಗಿದೆ ಎಂದರು.
ಸಂಸ್ಥೆಯ ವ್ಯವಸ್ಥಾಪಕ ಫಾದರ್ ಸಂಜಯ್‌ಕುಮಾರ್ ಮಾತನಾಡಿ, ಮನುಷ್ಯರು ಪರಿಸರಕ್ಕೆ ನಿರಂತರವಾಗಿ ಹಾನಿ ಮಾಡುತ್ತಿದ್ದರೂ ಪರಿಸರ ನಮ್ಮನ್ನು ಸಹಿಸಿಕೊಂಡು ಬರುತ್ತಿದೆ. ಹಾಗಾಗಿ ಪರಿಸರದ ಬಗ್ಗೆ ಕಾಳಜಿಯನ್ನು ತೋರದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ತಪ್ಪಿದ್ದಲ್ಲ. ಆದ್ದರಿಂದ ಪ್ರತಿಯೊಬ್ಬರೂ ಪರಿಸರವನ್ನು ಕಾಪಾಡಬೇಕಿದೆ ಎಂದು ತಿಳಿಸಿದರು.
ಬಿಆರ್‌ಸಿ ವೆಂಕಟೇಶ್, ಶಿಕ್ಷಣ ಸಂಯೋಜಕರಾದ ಚಿನ್ನಪ್ಪಯ್ಯ, ಮಹೇಶ್, ಪ್ರಾಂಶುಪಾಲೆ ಸಿಸ್ಟರ್ ಶೀಲಾ ಮೇರಿ, ಮುಖ್ಯಶಿಕ್ಷಕರಾದ ಸುಬ್ರಹ್ಮಣ್ಯ, ಸಿಸ್ಟರ್ ಜೆಸಿಂತಾ, ಪುಷ್ಪ, ಎಎಸೈ ಕಿರಣ್, ಶಿಕ್ಷಕರು ಹಾಗೂ ಉಪನ್ಯಾಸಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net