ಬಾಬೂಜಿ ಜಯಂತಿ ಬಹಿಷ್ಕಾರ ನಿರ್ಧಾರ

*  ಜಗಜೀವನರಾಂ ಒಕ್ಕೂಟದ ಅಧ್ಯಕ್ಷ ಬೂದುಬಾಳು ಮಹದೇವ ಆಕ್ರೋಶ
* ಜಗಜೀವನರಾಂ ಒಕ್ಕೂಟದ ಅಧ್ಯಕ್ಷ ಬೂದುಬಾಳು ಮಹದೇವ ಆಕ್ರೋಶ
Published on
ಹನೂರು : ಸಮುದಾಯವನ್ನು ಕಡೆಗಣಿಸಿರುವ ಹಿನ್ನೆಲೆಯಲ್ಲಿ ಏ.5 ರಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿರುವ ಡಾ. ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದೇವೆ ಎಂದು ಡಾ. ಬಾಬು ಜಗಜೀವನರಾಂ ಒಕ್ಕೂಟದ ಅಧ್ಯಕ್ಷ ಬೂದುಬಾಳು ಮಹದೇವ ತಿಳಿಸಿದರು.
ಬಾಬೂಜಿ ಜಯಂತಿ ಆಚರಣೆ ಸಂಬಂಧ ಶಾಸಕ ಎಂ.ಆರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿತ್ತು. ಜಯಂತಿ ಆಯೋಜನೆ ಸಂಬಂಧ ಮುಖಂಡರೊಂದಿಗೆ ಚರ್ಚಿಸಲಾಗುವುದು ಎಂದು ಶಾಸಕರು ತಿಳಿಸಿದ್ದರು. ಆದರೆ ಈವರೆಗೂ ಈ ಕಾರ್ಯವಾಗಿಲ್ಲ. ಇದರಿಂದ ಸಮುದಾಯವನ್ನು ಕಡೆಗಣಿಸಲಾಗಿದೆ. ಆದ್ದರಿಂದ ಜಯಂತಿಯನ್ನು ಬಹಿಷ್ಕರಿಸಿದ್ದೇವೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಾದರ ಮಹಾಸಭಾದ ತಾಲೂಕು ಅಧ್ಯಕ್ಷ ಸುದೇಶ್ ಮಾತನಾಡಿ, ಚಾ.ನಗರ, ಗುಂಡ್ಲುಪೇಟೆ ಹಾಗೂ ಕೊಳ್ಳೆಗಾಲದಲ್ಲಿ ಬಾಬುಜಿ ಜಯಂತಿಯು ವಿಜೃಂಭಣೆಯಿಂದ ನಡೆಯಲಿದೆ. ಆದರೆ ಹನೂರಿನಲ್ಲಿ ಜಯಂತಿ ಆಯೋಜನೆ ಸಂಬಂಧ ಸಮುದಾಯವನ್ನು ನಿರ್ಲಕ್ಷಿಸಲಾಗಿದೆ. ನಮ್ಮ ಗಮನಕ್ಕೆ ತಿಳಿಸದೇ ಮುಖ್ಯ ಭಾಷಣಾಕಾರರನ್ನು ಆಯ್ಕೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಪಾಳ್ಯ ರಾಚಯ್ಯ, ಬಾಬೂಜಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಚನ್ನಾಲಿಂಗನಹಳ್ಳಿ ರವಿ, ಮುಖಂಡರಾದ ಸುದೇಶ್, ರಾಚಯ್ಯ, ಮುತ್ತುರಾಜು, ಮಾದೇವ, ರಘು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net