ಬಾಳೆಗೊನೆ ಕದಿಯುತ್ತಿದ್ದ ಆರೋಪಿಗಳ ಬಂಧನ

ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಜಮೀನುಗಳಲ್ಲಿ ಬಾಳೆಗೊನೆಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಬ್‌ಇನ್ಸ್‌ಪೆಕ್ಟರ್ ಲೋಕೇಶ್ ಇತರರು ಇದ್ದರು.
ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಜಮೀನುಗಳಲ್ಲಿ ಬಾಳೆಗೊನೆಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಬ್‌ಇನ್ಸ್‌ಪೆಕ್ಟರ್ ಲೋಕೇಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • suspects arrested
  • banana theft
ಗುಂಡ್ಲುಪೇಟೆ: ತಾಲೂಕಿನ ಬೇಗೂರು ಪೊಲೀಸರು ಕಾರ್ಯಾಚರಣೆ ನಡೆಸಿ ಹಲವಾರು ದಿನಗಳಿಂದ ರೈತರ ಜಮೀನುಗಳಲ್ಲಿ ಬಾಳೆಗೊನೆಗಳನ್ನು ಕದಿಯುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ನಂಜನಗೂಡು ತಾಲೂಕಿನ ಹೆಮ್ಮರಗಾಲದ ರಾಜಶೇಖರ ಬಿನ್ ಗೋಪಾಲಶೆಟ್ಟಿ, ಕೆಂಪರಾಜು ಬಿನ್ ಗೋಪಾಲಶೆಟ್ಟಿ ಹಾಗೂ ತಗಡೂರಿನ ಮಹೇಶ ಬಿನ್ ಸಿದ್ದಶೆಟ್ಟಿ ಎಂಬುವರೇ ಬಂಧಿತರು. ಆರೋಪಿಗಳು ಠಾಣೆ ವ್ಯಾಪ್ತಿಯ ನಿಟ್ರೆ ಮತ್ತು ಅರಳಿಕಟ್ಟೆ ಮುಂತಾದ ಗ್ರಾಮಗಳ ರೈತರ ಜಮೀನುಗಳಲ್ಲಿ ಡಿಸೆಂಬರ್ ಮತ್ತು ಜನವರಿ ತಿಂಗಳಿನಲ್ಲಿ ಕಟಾವಿಗೆ ಬಂದಿದ್ದ ಬಾಳೆಗೊನೆಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.
ಅಪರಾಧ ವಿಭಾಗದ ಸಬ್‌ಇನ್ಸ್‌ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗೆ ಮುಂದಾದ ಪೊಲೀಸರು ಮೊಬೈಲ್ ಟವರ್ ಆಧಾರದ ಮೇಲೆ ಪತ್ತೆಕಾರ್ಯ ಕೈಗೊಂಡರು. ತಾಂತ್ರಿಕ ಸಹಾಯದಿಂದ ಆರೋಪಿಗಳನ್ನು ಪತ್ತೆಹಚ್ಚಿ ಸೋಮವಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net