ಗುಂಡ್ಲುಪೇಟೆ ಪಟ್ಟಣದ ಸೋಮೇಶ್ವರ ಹಾಸ್ಟೆಲ್‌ನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರಂಜನಕುಮಾರ್ ಮಾತನಾಡಿದರು. ಗಣೇಶ್ ಪ್ರಸಾದ್, ಎಚ್.ಎಸ್.ನಂಜಪ್ಪ, ಗುರುಪ್ರಸಾದ್, ಜಿ.ಕೆ.ಲೋಕೇಶ್, ಪ್ರಣಯ್, ಬಸವಣ್ಣ, ಮಹೇಶ್, ನಾಗೇಂದ್ರ ಇದ್ದರು.
ಗುಂಡ್ಲುಪೇಟೆ: ಪಟ್ಟಣದಲ್ಲಿ ಮೇ 23ರಂದು ಬಸವ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿರ್ಧರಿಸಿತು.
ಪಟ್ಟಣದ ಸೋಮೇಶ್ವರ ಹಾಸ್ಟೆಲ್‌ನಲ್ಲಿ ಶನಿವಾರ ಮಹಾಸಭಾ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮತ್ತು ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಸೇರಿದಂತೆ ಮಹಾಸಭಾ ನಿರ್ದೇಶಕರು ಪಾಲ್ಗೊಂಡ ಸಭೆಯಲ್ಲಿ ಕಳೆದ ಬಾರಿಗಿಂತ ಈ ಸಾರಿ ಜಯಂತಿಯನ್ನು ಇನ್ನೂ ವಿಜೃಂಭಣೆಯಿಂದ ಆಚರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.
ತಾಲೂಕಿನ ಎಲ್ಲ ಮಠಾಧೀಶರನ್ನು ಆಹ್ವಾನಿಸಿ ಜೆಎಸ್‌ಎಸ್ ಕಾಲೇಜಿನಿಂದ ಬಸವೇಶ್ವರರ ಭಾವಚಿತ್ರವನ್ನು ಜನಪದ ಕಲಾತಂಡಗಳು ಹಾಗೂ ಮಂಗಳ ವಾದ್ಯಗಳೊಂದಿಗೆ ಪ್ರಮುಖಬೀದಿಗಳಲ್ಲಿ ಮೆರವಣಿಗೆ ಮಾಡಲು, ಪರೀಕ್ಷೆಗಳಲ್ಲಿ ಅತಿಹೆಚ್ಚು ಆಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದರ ಜತಗೆ ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನ ಉಪಾಹಾರ ವ್ಯವಸ್ಥೆ ಮಾಡುವ ಕುರಿತು ನಿರ್ಧರಿಸಲಾಯಿತು.
ಮಹಾಸಭಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಗುರುಪ್ರಸಾದ್, ಜಿ.ಕೆ.ಲೋಕೇಶ್, ಪ್ರಣಯ್, ಬಸವಣ್ಣ, ಮಹೇಶ್, ನಾಗೇಂದ್ರ ಸೇರಿದಂತೆ ಹಲವರು ಇದ್ದರು.