ಯಳಂದೂರಿನಲ್ಲಿ ನಾಳೆ ಬಸವ ಉತ್ಸವ

ಯಳಂದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಬಸವ ಉತ್ಸವ ಸಮಾರಂಭದ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಜಿ.ಮಹದೇವಸ್ವಾಮಿ ಮಾತನಾಡಿದರು.
ಯಳಂದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಬಸವ ಉತ್ಸವ ಸಮಾರಂಭದ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಜಿ.ಮಹದೇವಸ್ವಾಮಿ ಮಾತನಾಡಿದರು.
Published on
ಯಳಂದೂರು: ಯಳಂದೂರು ಪಟ್ಟಣದಲ್ಲಿ ಜು.25ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಬಸವ ಜಯಂತಿ ಆಚರಣಾ ಸಮಿತಿ ಹಾಗೂ ಬಸವ ಬಳಗಗಳ ಒಕ್ಕೂಟದಿಂದ ಬಸವ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಜಿ.ಮಹದೇವಪ್ಪ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.30ಕ್ಕೆ ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿ ಸುತ್ತೂರು ಮಠದ ಪೀಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ವಾಟಾಳು ಮಠದ ಶ್ರೀಗಳು, ಸಂಸದ ಸುನೀಲ್ ಬೋಸ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಸಿ.ಪುಟ್ಟರಂಗಶೆಟ್ಟಿ, ಗಣೇಶ್ ಪ್ರಸಾದ್, ಮಂಜುನಾಥ್, ಮಾಜಿ ಶಾಸಕರಾದ ಎನ್.ಮಹೇಶ್, ಎಸ್.ಬಾಲರಾಜು, ಜಿ.ಎನ್.ನಂಜುಂಡಸ್ವಾಮಿ, ಮುಖಂಡರಾದ ಮೂಡ್ಲುಪುರ ನಂದೀಶ್, ಡಾ.ಶ್ವೇತಾ ಭಾಗವಹಿಸಲಿದ್ದಾರೆ ಎಂದರು.
ಬಸವ ಉತ್ಸವ ಸಮಿತಿ ಅಧ್ಯಕ್ಷ ಕೆಸ್ತೂರು ಪುಟ್ಟಸುಬ್ಬಪ್ಪ ಮಾತನಾಡಿ, ಬಸವೇಶ್ವರ ವೃತ್ತದಿಂದ ಪಟ್ಟಣದ ನಾಡಮೇಗಲ್ಮು ದೇಗುಲ, ದೊಡ್ಡಂಗಡಿ ಬೀದಿ, ಬಳೇಪೇಟೆ, ಹಳೇ ಅಂಚೆ ಕಚೇರಿ ರಸ್ತೆ, ಕೆ.ಕೆ.ರಸ್ತೆ ಮೂಲಕ ಬಸವೇಶ್ವರ ಪುತ್ಥಳಿಯನ್ನು ಮೆರವಣಿಗೆ 8 ನಂದಿಕಂಬಗಳು, ವೀರಗಾಸೆ, ಡೊಳ್ಳು, ಹುಲಿವೇಷ, ಗೊರುಕನ, ಹಳ್ಳಿಕಾರ್ ಹೋರಿಗಳು, ಬಸವ, ಜಲ್ಲಿಕಟ್ಟು ಹೋರಿ, ತಾಲೂಕಿನ 20 ಗ್ರಾಮಗಳಿಂದ ಬಸವೇಶ್ವರರ ಜೀವನ ಚರಿತ್ರೆ ಬಿಂಬಿಸುವ ಸ್ತಬ್ಧಚಿತ್ರಗಳು, ಪಲ್ಲಕ್ಕಿ, ಬಸವೇಶ್ವರರ ಅಶ್ವರೂಢ ಕಂಚಿನ ಪ್ರತಿಮೆ ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಳ್ಳಲಿವೆ. ನಂತರ ಜೆಎಸ್‌ಎಸ್ ವಿದ್ಯಾಸಂಸ್ಥೆಯ ಆವರಣದಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ವೀರಶೈವ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಗೌಡಹಳ್ಳಿ ರವಿ, ಉತ್ಸವ ಸಮಿತಿ ಉಪಾಧ್ಯಕ್ಷ ಶಿವಕುಮಾರ ಸ್ವಾಮಿ, ಕಾರ್ಯದರ್ಶಿ ಕೊಮರನಪುರ ಚಂದ್ರಶೇಖರ್, ಕೆಸ್ತೂರು ಮಹದೇವಸ್ವಾಮಿ, ಯುವ ಘಟಕದ ಅಧ್ಯಕ್ಷ ಮಲ್ಲಿಗೆಹಳ್ಳಿ ಸಂತೋಷ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net