ಭಗೀರಥ ಜಯಂತಿ ಸಭೆ: ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ಪ್ರತಿಯೊಬ್ಬರೂ ಸಂಘಟಿತರಾಗುವುದರ ಮೂಲಕ ಸಮುದಾಯದ ಅಭಿವೃದ್ಧಿಗೆ ಗಮನ ನೀಡಬೇಕು.
ಏ.23 ರಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಗೀರಥ ಜಯಂತಿಯನ್ನು ಆಚರಿಸಲಾಗುವುದು. ವಿಜೃಂಭಣೆಯ ಜಯಂತಿ ಆಚರಣೆಗೆ ದಿನಾಂಕ ನಿಗದಿಪಡಿಸಿ ಸಂಪೂರ್ಣ ಸಹಕಾರ ನೀಡಲಾಗುವುದು. ಸಮುದಾಯಕ್ಕೆ ಸಿಗಬೇಕಾದ ಸೌಕರ್ಯವನ್ನು ದೊರಕಿಸಿ ಕೊಡಲಾಗುವುದು ಎಂದು ತಿಳಿಸಿದರು.
ಮುಖಂಡರಾದ ಮುದ್ದುಗಾಮಶೆಟ್ಟಿ, ನಿಂಗಶೆಟ್ಟಿ, ರಂಗಸ್ವಾಮಿ ಹಾಗೂ ಇನ್ನಿತರರಿದ್ದರು.