ಅಪಘಾತದಲ್ಲಿ ಬೈಕ್ ಸವಾರ ಮೃತ

crime
crime
Published on
ಹನೂರು: ತಾಲೂಕಿನ ಕೌದಳ್ಳಿ ವಡಕೆಹಳ್ಳ ಮಾರ್ಗಮಧ್ಯೆ ಭಾನುವಾರ ರಾತ್ರಿ ಮಿನಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟಿದ್ದಾರೆ.
ತಾಲೂಕಿನ ಕೆ.ಗುಂಡಾಪುರ ಗ್ರಾಮದ ರಜಿನಿ (35) ಮೃತರು. ಇವರು ತಮಿಳುನಾಡಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಕುಟುಂಬದೊಂದಿಗೆ ವಾಸವಿದ್ದರು. ಕಾರ್ಯನಿಮಿತ್ತ ಗ್ರಾಮಕ್ಕೆ ಬೈಕ್‌ನಲ್ಲಿ ಆಗಮಿಸಿ ವಾಪಸಾಗುತ್ತಿದ್ದರು.
ಈ ವೇಳೆ ಕೌದಳ್ಳಿ ಬಳಿ ಎದುರು ಬಂದ ಮಿನಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟರು. ಸುದ್ದಿ ತಿಳಿದು ರಾಮಾಪುರ ಪೊಲೀಸರು ಪರಿಶೀಲನೆ ನಡೆಸಿದರು. ಮೃತದೇಹವನ್ನು ಹನೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರಕ್ಕೆ ರವಾನಿಸಿ ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net