ಮಂಡ್ಯ ಜಿಲ್ಲೆ ಬೆಳಕವಾಡಿ ಗ್ರಾಮದ ಯೋಗೇಶ್ (36) ಮೃತಪಟ್ಟವರು. ಇವರು ಮ.ಬೆಟ್ಟಕ್ಕೆ ಬೈಕ್‌ನಲ್ಲಿ ತೆರಳಿ ರಾತ್ರಿ 9 ಗಂಟೆಯಲ್ಲಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಈ ವೇಳೆ ಮಲ್ಲಯ್ಯನಪುರ ಬಳಿ ಎದುರು ಬಂದ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ರಾಮಾಪುರ ಪೊಲೀಸರು ಪರಿಶೀಲನೆ ನಡೆಸಿದರು. ಮೃತದೇಹವನ್ನು ಹನೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.