ಬಿಜೆಪಿ ವಾಮಮಾರ್ಗದ ಅಧಿಕಾರಕ್ಕಾಗಿ ಎಸ್‌ಐಆರ್

ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್  ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಚಾಮರಾಜನಗರ ಗ್ರಾಮಾಂತರ ಹಾಗೂ ನಗರ ಬ್ಲಾಕ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಕಾರ್ಯಗಾರವನ್ನು ಶಾಸಕ ಸಿ. ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಮತದಾರರ ಜಾಗೃತಿ ಸಮಿತಿಯ  ಪೃಥ್ವಿಕುಮಾರ್, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಎ.ಎಸ್. ಗುರುಸ್ವಾಮಿ ಇತರರು ಇದ್ದರು.
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಚಾಮರಾಜನಗರ ಗ್ರಾಮಾಂತರ ಹಾಗೂ ನಗರ ಬ್ಲಾಕ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಕಾರ್ಯಗಾರವನ್ನು ಶಾಸಕ ಸಿ. ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಮತದಾರರ ಜಾಗೃತಿ ಸಮಿತಿಯ ಪೃಥ್ವಿಕುಮಾರ್, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಎ.ಎಸ್. ಗುರುಸ್ವಾಮಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿ.ಪುಟ್ಟರಂಗಶೆಟ್ಟಿ ಆರೋಪ
  • ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರಿಗೆ ಕಾರ್ಯಾಗಾರ
ಚಾಮರಾಜನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕೇಂದ್ರ ಸರ್ಕಾರದ ಹುನ್ನಾರವಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಚಾಮರಾಜನಗರ ಗ್ರಾಮಾಂತರ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಎಸ್‌ಐಆರ್ ನೆಪದಲ್ಲಿ ಕಾಂಗ್ರೆಸ್‌ಗೆ ಮತ ಹಾಕುವವರನ್ನು ಪಟ್ಟಿಯಿಂದ ಕೈಬಿಡಲು ಹುನ್ನಾರ ನಡೆಸಿದೆ. ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ಇದಕ್ಕೆ ಅವಕಾಶ ನೀಡಬಾರದು ಎಂದು ತಿಳಿಸಿದರು.
ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಮೂಲಕ ಮತದಾರರನ್ನು ಹೊರಗಿಡಲಾಯಿತು. ಬಿಜೆಪಿ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಲು ಇಂತಹ ಪ್ರಯತ್ನ ನಡೆಸುತ್ತಿದೆ. ಆದ್ದರಿಂದ ನಮ್ಮ ಮತದಾರರನ್ನು ಗಟ್ಟಿಗೊಳಿಸಿಕೊಳ್ಳಲು ಬೂತ್‌ಮಟ್ಟದಲ್ಲಿ ಬಿಎಲ್‌ಒಗಳು ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ನೈಜ ಮತದಾರನ್ನು ಪಟ್ಟಿಯಿಂದ ಕೈಬಿಡದಂತೆ ನೋಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ. ಇದನ್ನು ಮತದಾರರಿಗೆ ಮನದಟ್ಟು ಮಾಡಿಕೊಂಡಿ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಕಾಂಗ್ರೆಸ್ ಮತದಾರರ ಸಂಖ್ಯೆಯನ್ನು ಕಡಿತಗೊಳಿಸಲು ಮುಂದಾಗಿದೆ. ಈಗಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಬಿಜೆಪಿ 90 ಶಾಸಕರನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಮಾಹಿತಿ ಇದೆ. ಈ ಕ್ಷೇತ್ರಗಳಲ್ಲಿ ಮತದಾರರನ್ನು ಕಡಿತಗೊಳಿಸುವ ಪಿತೂರಿ ಮಾಡುತ್ತಿದೆ. ಇದನ್ನು ತಡೆಯಲು ಹಾಗೂ ರಾಜ್ಯ ಮತ್ತು ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠಗೊಳಿಸಲು ಎಲ್ಲರೂ ಶ್ರಮಿಸೋಣ ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕಣೆ ನಿರಂತರವಾಗಿರುತ್ತದೆ. ವರ್ಷಕ್ಕೆ ಎರಡು ಬಾರಿ ಹೊಸ ಮತದಾರರನ್ನು ಸೇರ್ಪಡೆ, ಮೃತ ಪಟ್ಟವರನ್ನು ತೆಗೆವಯುವುದು, ಸ್ಥಳ ಬದಲಾವಣೆ ಮಾಡುವ ಪ್ರಕ್ರಿಯೆ ನಿರಂತರವಾಗಿತ್ತು. ಆದರೆ, ಬಿಜೆಪಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಕಾಂಗ್ರೆಸ್ ಮತದಾರರನ್ನು ತೆಗೆದು ಹಾಕಲು ಇಂಥ ಕುತಂತ್ರ ಮಾಡುತ್ತಿದೆ. ಇದರ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಗಾರವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ನಂತರ ಮತದಾರರ ಜಾಗೃತಿ ಸಮಿತಿಯ ಪೃಥ್ವಿಕುಮಾರ್ ಮತದಾರರ ವಿಶೇಷ ಪರಿಷ್ಕರಣೆ ಕುರಿತು ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್. ಗುರುಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್. ಮಹದೇವ್, ಗ್ಯಾರಂಟಿ ಯೋಜನೆ ಸಮಿತಿಯ ತಾಲೂಕು ಅಧ್ಯಕ್ಷ ಸೋಮೇಶ್ವರ್, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್‌ಶೆಟ್ಟಿ, ಮುಖಂಡರಾದ ರವಿ ಬಿಸಲವಾಡಿ, ಯರಗನಹಳ್ಳಿ ಬಸವಣ್ಣ, ನಯಾಜ್, ಕರಿನಂಜನಪುರಸ್ವಾಮಿ, ಮರಿಯಲ ಕುಮಾರ್ ಮತ್ತು ಬಿಎಲ್‌ಎಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net