ಬಾವಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆ

ಮಲೆಮಹದೇಶ್ವರ ಬೆಟ್ಟದಲ್ಲಿ ನಾಗಮಲೆ ಭವನ ರಸ್ತೆಯ ಬಾವಿ.
ಮಲೆಮಹದೇಶ್ವರ ಬೆಟ್ಟದಲ್ಲಿ ನಾಗಮಲೆ ಭವನ ರಸ್ತೆಯ ಬಾವಿ.
Published on
ಮಹದೇಶ್ವರಬೆಟ್ಟ: ಇಲ್ಲಿನ ನಾಗಮಲೆ ಭವನದ ರಸ್ತೆಯಲ್ಲಿರುವ ಬಾವಿಯಲ್ಲಿ ಬುಧವಾರ ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ.
ರಸ್ತೆ ಬದಿಯಲ್ಲಿನ ಬಾವಿಯಲ್ಲಿ ಬೆಳಗ್ಗೆ ವ್ಯಕ್ತಿಯೊಬ್ಬರ ಶವವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಮೇಲೆತ್ತಿ ಪರಿಶೀಲಿಸಿದರು. ಆದರೆ ವಿಳಾಸ ಪತ್ತೆಯಾಗದ ಹಿನ್ನೆಲೆಯಲ್ಲಿ ಮೃತದೇಹವನ್ನು ಚಾ.ನಗರ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಸಂಬಂಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net