ಪರೀಕ್ಷೆಯಲ್ಲಿ ಜಿಲ್ಲೆಯ 44 ಶಾಲೆಗಳಿಗೆ ಶೇ.100ರಷ್ಟು ಲಿತಾಂಶ ಬಂದಿದೆ. ಚಾಮರಾಜನಗರ ತಾಲೂಕಿನ 9, ಗುಂಡ್ಲುಪೇಟೆ ತಾಲೂಕಿನ 10, ಹನೂರು ತಾಲೂಕಿನ 12, ಕೊಳ್ಳೇಗಾಲ ತಾಲೂಕಿನ 12, ಯಳಂದೂರಿನ 1 ಶಾಲೆ ಶೇ.100ರಷ್ಟು ಲಿತಾಂಶ ಪಡೆದುಕೊಂಡಿದೆ. ಸರ್ಕಾರಿ ಶಾಲೆಗಳಲ್ಲಿ ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಗುಂಡ್ಲುಪೇಟೆಯ ಆದರ್ಶ ವಿದ್ಯಾಲಯ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಕೆಂಪದೇವಮ್ಮ ಸರ್ಕಾರಿ ಜೂನಿಯರ್ ಕಾಲೇಜು(ಪ್ರೌಢಶಾಲೆ ವಿಭಾಗ), ಹನೂರು ತಾಲೂಕಿನ ಏಕಲವ್ಯ ಮಾದರಿ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ-2, ಇಂದಿರಾ ಗಾಂಧಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಯಳಂದೂರಿನ ಮೊರಾರ್ಜಿ ದೇಸಾಯಿ ಶಾಲೆಗಳ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ.100ರಷ್ಟು ಲಿತಾಂಶ ತಂದಿದ್ದಾರೆ.