ಜ.15 ರಂದು ಬಿಎಸ್ಪಿ ಪ್ರೇರಣಾ ಸಮಾವೇಶ

ಜ.15 ರಂದು ಬಿಎಸ್ಪಿ ಪ್ರೇರಣಾ ಸಮಾವೇಶ
ಜ.15 ರಂದು ಬಿಎಸ್ಪಿ ಪ್ರೇರಣಾ ಸಮಾವೇಶ
Published on

ಪ್ರಮುಖ ಮುಖ್ಯಾಂಶಗಳು

  • ಜ.15 ರಂದು ಬಿಎಸ್ಪಿ ಪ್ರೇರಣಾ ಸಮಾವೇಶ
  • ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ನಡೆಯಲಿರುವ ಕಾರ್ಯಕ್ರಮ
  • ಜಿಲ್ಲೆಯಿಂದ ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ
ಚಾಮರಾಜನಗರ: ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರ ಜನುಮದಿನದ ಅಂಗವಾಗಿ ಜ.15 ರಂದು ಪ್ರೇರಣಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಎನ್.ನಾಗಯ್ಯ ಹೇಳಿದರು.
ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಸಂಯೋಜಕ ಹಾಗೂ ಮಾಜಿ ಸಂಸದ ರಾಜಾರಾಮ್ ಜೀ, ಬಿಎಸ್ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ, ರಾಜ್ಯ ಸಂಯೋಜಕ ಹ.ರಾ.ಮಹೇಶ್ ಹಾಗೂ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಿಂದ 100 ಕಾರ್ಯಕರ್ತರು ಆಗಮಿಸಲಿದ್ದಾರೆ. ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯಿಂದ ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಬಿಎಸ್‌ಪಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾ ಉಸ್ತುವಾರಿ ಪುಟ್ಟಸ್ವಾಮಿ ರಾಮಸಮುದ್ರ, ಜಿಲ್ಲಾಧ್ಯಕ್ಷ ಬ.ಮ.ಕೃಷ್ಣಮೂರ್ತಿ, ಖಜಾಂಚಿ ಶಿವಶಂಕರ್, ತಾಲೂಕು ಅಧ್ಯಕ್ಷ ಚಂದ್ರಕಾಂತ್, ಗ್ರಾ.ಪಂ ಸದಸ್ಯ ಬಿಸಲವಾಡಿ ಬಾಲರಾಜು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net