ಮಾರ್ಗ ಮಧ್ಯ ಕೆಟ್ಟು ನಿಲ್ಲುವ ಸಾರಿಗೆ ಬಸ್

ರಾಮಾಪುರದಲ್ಲಿ ಸಾರಿಗೆ ಬಸ್ ಕೆಟ್ಟು ನಿಂತ ಪರಿಣಾಮ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು.
ರಾಮಾಪುರದಲ್ಲಿ ಸಾರಿಗೆ ಬಸ್ ಕೆಟ್ಟು ನಿಂತ ಪರಿಣಾಮ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು.
Published on
ಹನೂರು: ತಾಲೂಕಿನ ರಾಮಾಪುರ ಗ್ರಾಮದಲ್ಲಿ ಸೋಮವಾರ ಕೆಎಸ್‌ಆರ್‌ಟಿಸಿ ಬಸ್ ಕೆಟ್ಟು ನಿಂತ ಪರಿಣಾಮ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು.
ಹೋಬಳಿ ಕೇಂದ್ರವಾದ ರಾಮಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳ ನೂರಾರು ವಿದ್ಯಾರ್ಥಿಗಳು ನಿತ್ಯ ಹನೂರು ಹಾಗೂ ಕೊಳ್ಳೇಗಾಲದ ಶಾಲಾ, ಕಾಲೇಜಿಗೆ ತೆರಳುತ್ತಾರೆ. ಬೆಳಗ್ಗೆ 8.30ಕ್ಕೆ ವಿದ್ಯಾರ್ಥಿಗಳು ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಆಗಮಿಸಿದ ಸಾರಿಗೆ ಬಸ್ ಕೆಟ್ಟು ನಿಂತಿತು. ಇದರಿಂದ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಕಾದು ನಿಲ್ಲುವಂತಾಯಿತು. ಕೆಲ ವಿದ್ಯಾರ್ಥಿಗಳು ಖಾಸಗಿ ಬಸ್ ಮೂಲಕ ತೆರಳಿದರೆ, ಇನ್ನು ಕೆಲವರು ಆಗಮಿಸಿದ ಸಾರಿಗೆ ಬಸ್ಸಿನಲ್ಲಿ ನೂಕು ನುಗ್ಗಲಿನಲ್ಲಿ ತೆರಳುವಂತಾಯಿತು. ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು. ಸಾರಿಗೆ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರಿಂದ ಆಕ್ಷೇಪ ವ್ಯಕ್ತವಾಯಿತು.
ಈ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳು ಸುಸ್ಥಿತಿಯಲಿಲ್ಲ. ಇದರಿಂದ ಆಗಾಗ್ಗೆ ಮಾರ್ಗಮಧ್ಯೆ ಕೆಟ್ಟು ನಿಲ್ಲುತ್ತಿವೆ. ಸುಸ್ಥಿತಿಯಲ್ಲಿರುವ ಬಸ್ ಬಿಡುವಂತೆ ವಿದ್ಯಾರ್ಥಿಗಳು ಸಾರಿಗೆ ಇಲಾಖೆಯ ಅಧಿಕಾರಿಗಳಲ್ಲಿ ಹಲವು ಬಾರಿ ಮನವಿ ಮಾಡಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಈ ಮಾರ್ಗಕ್ಕೆ ಸುಸ್ಥಿತಿಯಲ್ಲಿರುವ ಬಸ್ ಬಿಡುವಂತೆ ಗ್ರಾಮದ ಮಾದೇಶ್ ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net