ಸಾಲೂರು ಮಠದಲ್ಲಿ ಕ್ಯಾಲೆಂಡರ್ ಬಿಡುಗಡೆ

ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕ್ಯಾಲೆಂಡರ್ ಅನ್ನು ಪೀಠಾಧಿಪತಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬಿಡುಗಡೆ ಮಾಡಿದರು. ಚಂದ್ರಶೇಖರ್, ಚಂದ್ರಶೇಖರಯ್ಯ, ಪ್ರದೀಪ್ ಇತರರಿದ್ದರು.
ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕ್ಯಾಲೆಂಡರ್ ಅನ್ನು ಪೀಠಾಧಿಪತಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬಿಡುಗಡೆ ಮಾಡಿದರು. ಚಂದ್ರಶೇಖರ್, ಚಂದ್ರಶೇಖರಯ್ಯ, ಪ್ರದೀಪ್ ಇತರರಿದ್ದರು.
Published on
ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದಲ್ಲಿ ಗುರುವಾರ ಪೀಠಾಧಿಪತಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.
ಈ ವೇಳೆ ಶ್ರೀಗಳು ಮಾತನಾಡಿ, ಶಿಕ್ಷಕರು ಹಾಗು ಮಕ್ಕಳ ಅಭಿವೃದ್ಧಿಗೆ ಸಂಘವು ಅತ್ಯವಶ್ಯಕ ಈ ದಿಸೆಯಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಮೆಚ್ಚುಗೆಯ ಸಂಗತಿ. ಸಂಘವು ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಸೇತುವೆಯಾಗಿರಲಿ. ಶ್ರೀ ಮಹದೇಶ್ವರರ ಅನುಗ್ರಹ ಎಲ್ಲರ ಮೇಲಿರಲಿ ಎಂದು ಆಶಿಸಿದರು.
ಸಂಘದ ತಾಲೂಕು ಅಧ್ಯಕ್ಷ ಎಂ. ಸಿ ಚಂದ್ರಶೇಖರ್, ಜಿಲ್ಲಾ ಸಹ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಕಾರ್ಯದರ್ಶಿ ಚಂದ್ರಶೇಖರಯ್ಯ, ಖಜಾಂಚಿ ಪ್ರದೀಪ್, ನಿರ್ದೇಶಕರಾದ ಸ್ವಾಮಿ, ಶ್ರೀನಿವಾಸ್ ಹಾಗೂ ಕಸಾಪ ತಾಲೂಕು ಅಧ್ಯಕ್ಷ ಮಲ್ಲೇಶ್ ಮಾಲಿಂಕಟ್ಟೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net