ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

ಮಂಗಲ ಗ್ರಾಮದ ಬಳಿ ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಕಂದಕಕ್ಕೆ ಮಗುಚಿರುವುದು.
ಮಂಗಲ ಗ್ರಾಮದ ಬಳಿ ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಕಂದಕಕ್ಕೆ ಮಗುಚಿರುವುದು.
Published on
ಹನೂರು: ತಾಲೂಕಿನ ಮಂಗಲ ಗ್ರಾಮದ ಘೋರಿ ಕೆರೆಯ ಸಮೀಪದಲ್ಲಿ ಬುಧವಾರ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಮಗುಚಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನ ವೈಟ್‌ಫೀಲ್ಡ್ ನಿವಾಸಿ ಚಂದ್ರಪ್ಪ ಅವರು ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ಕಾರು ಚಲಾಯಿಸಿಕೊಂಡು ತಾಲೂಕಿನ ಅಲಗಾಪುರ ಗ್ರಾಮದ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಈ ವೇಳೆ ಎದುರು ಬಂದ ವಾಹನದಿಂದ ರಸ್ತೆ ಸಮೀಪಕ್ಕೆ ಸರಿಸಿದಾಗ ಕಾರು ಕಂದಕಕ್ಕೆ ಮಗುಚಿದೆ. ಸದ್ಯ ಕಾರು ಜಖಂಗೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಕ್ರೇನ್ ಮೂಲಕ ಕಾರನ್ನು ಹೊರ ತೆಗೆಯಲಾಯಿತು. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net