ಕಾರು ಡಿಕ್ಕಿಯಾಗಿ ಜಿಂಕೆ ಸಾವು

ಚಾಮರಾಜನಗರ-ಮೈಸೂರು ರಸ್ತೆಯಲ್ಲಿ ಕಾರು ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟಿರುವುದು.
ಚಾಮರಾಜನಗರ-ಮೈಸೂರು ರಸ್ತೆಯಲ್ಲಿ ಕಾರು ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟಿರುವುದು.
Published on
ಚಾಮರಾಜನಗರ: ಚಾಮರಾಜನಗರ-ಮೈಸೂರು ರಸ್ತೆಯಲ್ಲಿ ಭಾನುವಾರ ಕಾರು ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟಿದೆ.
ನಂಜನಗೂಡು ರಸ್ತೆಯಲ್ಲಿ ಬೈಪಾಸ್ ಮತ್ತು ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಕೆಳಗಿನ ರಸ್ತೆ ಬಳಿ ಜಿಂಕೆಗೆ ಕಾರು ಡಿಕ್ಕಿ ಹೊಡೆದಿದೆ. ಮೈಸೂರು ಮೂಲದ ದುರ್ಗಾಪ್ರಸಾದ್ ಅವರು ಕಾರಿನಲ್ಲಿ ಚಲಿಸುತ್ತಿದ್ದಾಗ ಸುಮಾರು 6 ವರ್ಷದ ಗಂಡು ಜಿಂಕೆಗೆ ಡಿಕ್ಕಿ ಹೊಡೆದಿದೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಚಾಮರಾಜನಗರ ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿಗಳು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ದಾಖಲು ಮಾಡಿದ್ದು, ಜಿಂಕೆ ಕಳೇಬರವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವೇಗ ಅಥವಾ ಅಜಾಗರೂಕತೆಯ ಚಾಲನೆಯ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net