ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ

ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ಗ್ಯಾರಂಟಿ ಯೋಜನೆ ಕಲಾಜಾಥಾ ಸಂಚಾರಿ ಪ್ರದರ್ಶನ ವಾಹನಕ್ಕೆ ಎಚ್.ವಿ.ಚಂದ್ರು ಚಾಲನೆ ನೀಡಿದರು. ಮೋನಾ ರೋತ್, ಟಿ.ಜವರೇಗೌಡ, ಸೋಮೇಶ್ವರ, ಮಾದಾಪುರ ಕುಮಾರ್, ಆರ್.ರಾಜೇಶ್, ಕುಮಾರ್, ಸುರೇಶ್ ಇನ್ನಿತರರಿದ್ದರು.
ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ಗ್ಯಾರಂಟಿ ಯೋಜನೆ ಕಲಾಜಾಥಾ ಸಂಚಾರಿ ಪ್ರದರ್ಶನ ವಾಹನಕ್ಕೆ ಎಚ್.ವಿ.ಚಂದ್ರು ಚಾಲನೆ ನೀಡಿದರು. ಮೋನಾ ರೋತ್, ಟಿ.ಜವರೇಗೌಡ, ಸೋಮೇಶ್ವರ, ಮಾದಾಪುರ ಕುಮಾರ್, ಆರ್.ರಾಜೇಶ್, ಕುಮಾರ್, ಸುರೇಶ್ ಇನ್ನಿತರರಿದ್ದರು.
Published on
ಚಾಮರಾಜನಗರ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ಜನಸಾಮಾನ್ಯರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಕುರಿತ ಸಂಚಾರಿ ಪ್ರದರ್ಶನ ವಾಹನದ ಮೂಲಕ ಜಾಗೃತಿ ಮೂಡಿಸುವ ಕಲಾ ಜಾಥಾಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. 
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕಲಾ ಜಾಥಾ ಸಂಚಾರಿ ಪ್ರದರ್ಶನ ವಾಹನಕ್ಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಇತರ ಗಣ್ಯರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. 
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ಮಾತನಾಡಿ, ಕಟ್ಟಕಡೆಯ ವ್ಯಕ್ತಿಗೂ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸರ್ವರಿಗೂ ಸರ್ಕಾರದ ಯೋಜನೆಗಳು ಲಭ್ಯವಾಗಬೇಕು. ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನವಾಗುತ್ತಿವೆ ಎಂದರು. 
ಈ ವೇಳೆ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸೋಮೇಶ್ವರ, ಸದಸ್ಯರಾದ ಮಾದಾಪುರ ಕುಮಾರ್, ಆರ್.ರಾಜೇಶ್, ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಸುರೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎ.ರಮೇಶ, ಸಾಹಿತಿ ಹಾಗೂ ರಂಗತರಂಗ ಟ್ರಸ್ಟ್ ಮುಖ್ಯಸ್ಥ ಸೋಮಶೇಖರ ಬಿಸಲ್ವಾಡಿ, ವಾರ್ತಾ ಸಹಾಯಕ ಸಿ.ಸುರೇಶ್‌ಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ್ ರಂಗರಾಜು, ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್ ಇನ್ನಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net