ಮ.ಬೆಟ್ಟದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ. ಇಲ್ಲಿಗೆ ದೀಪಾವಳಿ, ಮಹಾಶಿವರಾತ್ರಿ, ಯುಗಾದಿ, ಮಹಾಲಯ ಅಮಾವಾಸ್ಯೆ ಸೇರಿದಂತೆ ಇನ್ನಿತರ ಜಾತ್ರಾ ಮಹೋತ್ಸವ ವೇಳೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದರೆ ಹನೂರಿನಿಂದ ಮ.ಬೆಟ್ಟದವರೆಗಿನ ರಸ್ತೆಯ ಬಹುತೇಕ ಕಡೆಗಳಲ್ಲಿ ಗುಂಡಿಗಳು ನಿರ್ಮಾಣವಾಗಿದ್ದವು. ಇದರಿಂದ ವಾಹನ ಸವಾರರು ಸಂಚರಿಸಲು ತೊಂದರೆಪಡಬೇಕಿತ್ತು. ಈ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಗುಂಡಿ ಬಿದ್ದಿದ್ದ ರಸ್ತೆಗೆ ಪಿಡಬ್ಲ್ಯುಡಿ ಇಲಾಖೆ ತಕ್ಕಮಟ್ಟಿಗೆ ತೇಪೆ ಹಾಕಿತ್ತು. ಆದರೆ ಮಳೆಯ ಹಿನ್ನೆಲೆಯಲ್ಲಿ ಗುಂಡಿಗಳು ಮತ್ತೆ ಬಾಯ್ತೆರೆದುಕೊಂಡಿದ್ದವು. ಪರಿಣಾಮ ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಲ್ಲುವಂತಾಯಿತು. ಇದರಿಂದ ವಾಹನ ಸವಾರರು ಸಂಚರಿಸಲು ಮತ್ತೇ ಸಂಕಷ್ಟ ಎದುರಿಸುವಂತಾಯಿತು. ಇದರಿಂದ ಸ್ಥಳೀಯ ಹಾಗೂ ಇತರ ಜಿಲ್ಲೆಗಳಿಂದ ಆಗಮಿಸುವ ವಾಹನ ಸವಾರರಿಂದ ರಸ್ತೆ ಅಭಿವೃದ್ಧಿ ಪಡಿಸುವಂತೆ ಒತ್ತಾಯ ಕೇಳಿಬಂದಿತ್ತು.