ಮುಸುಕಿನ ಜೋಳದ ಫಸಲು ನಾಶ

ಹಾವಿನಮೂಲೆಯಲ್ಲಿ ಕುನ್ನಮ್ಮ ಅವರ ಜಮೀನಿಗೆ ಕಾಡಾನೆಗಳು ಲಗ್ಗೆ ಇಟ್ಟು ಮುಸುಕಿನ ಜೋಳದ ಫಸಲನ್ನು ನಾಶಪಡಿಸಿರುವುದು.
ಹಾವಿನಮೂಲೆಯಲ್ಲಿ ಕುನ್ನಮ್ಮ ಅವರ ಜಮೀನಿಗೆ ಕಾಡಾನೆಗಳು ಲಗ್ಗೆ ಇಟ್ಟು ಮುಸುಕಿನ ಜೋಳದ ಫಸಲನ್ನು ನಾಶಪಡಿಸಿರುವುದು.
Published on
ಹನೂರು: ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾವಿನಮೂಲೆಯ ಜಮೀನೊಂದಕ್ಕೆ ಶುಕ್ರವಾರ ತಡರಾತ್ರಿ ಕಾಡಾನೆಗಳು ಲಗ್ಗೆ ಇಟ್ಟು ಮುಸುಕಿನ ಜೋಳದ ಫಸಲನ್ನು ನಾಶಪಡಿಸಿವೆ.
ಗಿರಿಜನ ಮಹಿಳೆ ಕುನ್ನಮ್ಮ ಅವರು ಜಮೀನಿನಲ್ಲಿ ಮುಸುಕಿನ ಜೋಳದ ಫಸಲನ್ನು ಬೆಳೆದಿದ್ದು, ತೆನೆಗಳು ಬಿಟ್ಟಿದ್ದವು. ಆದರೆ ರಾತ್ರಿ ಸಮೀಪದ ಬಿಆರ್‌ಟಿ ಅರಣ್ಯ ಪ್ರದೇಶದಿಂದ ಜಮೀನಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಮುಸುಕಿನ ಜೋಳದ ಫಸಲನ್ನು ತಿಂದು, ತುಳಿದು ನಾಶಪಡಿಸಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರಿಶೀಲಿಸುವುದರ ಮೂಲಕ ಇಲಾಖೆಯಿಂದ ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ರೈತ ಮಹಿಳೆ ಕುನ್ನಮ್ಮ ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net