ಗಡಿ ಜಿಲ್ಲೆಯಲ್ಲಿ ಕನ್ನಡ ಭಾಷೆ ಗಟ್ಟಿ

 ನಾಲ್‌ರೋಡ್‌ನಲ್ಲಿ ಕರವೇ ವತಿಯಿಂದ ಆಯೋಜಿಸಿದ್ಧ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಮಾತನಾಡಿದರು. ಕೆ.ಎನ್ ಚೈತ್ರಾ, ಮೋಹನ್, ಮಹದೇವ, ರಿಯಾಜ್ ಪಾಷ ಇತರರು ಇದ್ದರು.
ನಾಲ್‌ರೋಡ್‌ನಲ್ಲಿ ಕರವೇ ವತಿಯಿಂದ ಆಯೋಜಿಸಿದ್ಧ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಮಾತನಾಡಿದರು. ಕೆ.ಎನ್ ಚೈತ್ರಾ, ಮೋಹನ್, ಮಹದೇವ, ರಿಯಾಜ್ ಪಾಷ ಇತರರು ಇದ್ದರು.
Published on
ಹನೂರು: ತಾಲೂಕಿನ ಗಡಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವುದು ರಾಜ್ಯಕ್ಕೆ ಸಂದೇಶ ರವಾನೆಯಾದಂತಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲೂಕಿನ ಗಡಿ ನಾಲ್‌ರೋಡ್‌ನಲ್ಲಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಹನೂರು ಘಟಕದ ವತಿಯಿಂದ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಚಾ.ನಗರ ಗಡಿ ಜಿಲ್ಲೆಯಾಗಿದ್ದರೂ ಜನಪದ ಸಾಹಿತ್ಯ ಶ್ರೀ ಮಂತಿಕೆಯಿಂದ ಕೂಡಿದೆ. ಕನ್ನದ ಭಾಷೆ ಗಟ್ಟಿಯಾಗಿದೆ. ಕನ್ನಡ ನಾಡಿನ ಏಳಿಗೆಗಾಗಿ ಕವಿಗಳು, ಸಾಹಿತಿಗಳು ಹಾಗೂ ಮಹಾನ್ ನಾಯಕರ ಕೊಡುಗೆ ಅಪಾರವಾಗಿದೆ. ಆದ್ದರಿಂದ ನಾಡು, ನುಡಿ ಹಾಗೂ ಜಲದ ಬಗ್ಗೆ ಪ್ರತಿಯೊಬ್ಬರೂ ಅಭಿಮಾನವನ್ನು ಹೊಂದಬೇಕು. ರಕ್ಷಿಸುವಂತಹ ಕೆಲಸವಾಗಬೇಕು. ಈ ದೆಸೆಯಲ್ಲಿ ಗಡಿಯಲ್ಲಿ ಕರವೇ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಇದು ರಾಜ್ಯಕ್ಕೆ ಸಂದೇಶ ರವಾನೆಯಾದಂತಾಗಿದೆ. ಇಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು: ಹನೂರು ತಾಲೂಕು ಎಲ್ಲ ಕ್ಷೇತ್ರಗಳಿಗಿಂತಲೂ ವಿಭಿನ್ನವಾಗಿದ್ದು, ಹೆಚ್ಚು ಅರಣ್ಯ ಪ್ರದೇಶದಿಂದ ಕೂಡಿದೆ. ಇಲ್ಲಿನ ಜನರು ಹಲವು ದಶಕದಿಂದಲೂ ವಾಸಿಸುತ್ತಿದ್ದರೂ ಅಗತ್ಯ ಮೂಲಸೌಕರ್ಯ ಪಡೆಯಲು ಸಾಧ್ಯವಾಗಿಲ್ಲ. ಹಾಗಾಗಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈಗಾಗಲೇ ಪಿಡಬ್ಲ್ಯುಡಿ ಇಲಾಖೆಯಿಂದ 220 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ತಾಲೂಕು ಪ್ರಜಾಸೌಧ, ನ್ಯಾಯಾಲಯ, ಬಸ್ ಡಿಪೋ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಲಾಗಿದೆ. ಇನ್ನು ಬೇಸಿಗೆ ಬಂತೆಂದರೆ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರುತ್ತಿದೆ. ಇದಕ್ಕಾಗಿ ಯೋಜನೆಯನ್ನು ರೂಪಿಸಲಾಗಿದೆ. ಮುಂಬರುವ ಏಪ್ರಿಲ್‌ನೊಳಗೆ ಎಲ್ಲ ಗ್ರಾಮಗಳಲ್ಲೂ ನೀರಿನ ಸಮಸ್ಯೆ ನೀಗಲಿದೆ. ರಾಮನಗುಡ್ಡೆ ಡ್ಯಾಂಗೆ ಸದ್ಯದಲ್ಲಿಯೇ ನೀರು ಹರಿದು ಬರಲಿದೆ. ಮಾರ್ಟಳ್ಳಿ ಭಾಗಕ್ಕೂ ಶಾಶ್ವತ ಕುಡಿಯುವ ನೀರು ಒದಗಿಸಲು ಚಿಂತನೆ ನಡೆಸಲಾಗಿದೆ. ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಪ್ರಮಾಣಿಕವಾಗಿ ಶ್ರಮಿಸಲಾಗುತ್ತಿದೆ. ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.
ತಹಸೀಲ್ದಾರ್ ಕೆ.ಎನ್ ಚೈತ್ರಾ, ವಕೀಲ ಮಹದೇವ, ಕರವೇ ಜಿಲ್ಲಾಧ್ಯಕ್ಷ ಮೋಹನ್, ಪ್ರಧಾನ ಕಾರ್ಯದರ್ಶಿ ರಿಯಾಜ್ ಪಾಷ, ತಾಲೂಕು ಘಟಕದ ಗೌರವಾಧ್ಯಕ್ಷ ನಟರಾಜುಗೌಡ, ಕಾರ್ಯದರ್ಶಿ ಮಹಮದ್ ಅಮಿನ್, ಗ್ರಾಪಂ ಅಧ್ಯಕ್ಷ ಇಗ್ನೇಶಿಮುತ್ತು, ನಿವೃತ್ತ ಸೈನಿಕ ಲೂಯಿಸ್ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net