ಪ್ರತಿಯೊಬ್ಬರೂ ಮಾನವ ಹಕ್ಕುಗಳನ್ನು ಗೌರವಿಸಿ

ಹನೂರಿನಲ್ಲಿ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಸುರೇಖಾ, ನಾಗೇಂದ್ರ, ಶೇಷಣ್ಣ, ಮಹೇಶ್ ಇತರರು ಇದ್ದರು.
ಹನೂರಿನಲ್ಲಿ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಸುರೇಖಾ, ನಾಗೇಂದ್ರ, ಶೇಷಣ್ಣ, ಮಹೇಶ್ ಇತರರು ಇದ್ದರು.
Published on
ಹನೂರು: ಪ್ರತಿಯೊಬ್ಬರೂ ಮಾನವ ಹಕ್ಕುಗಳನ್ನು ಗೌರವಿಸುವುದರ ಜತೆಗೆ ಧಕ್ಕೆಯಾಗದಂತೆ ಎಚ್ಚರ ವಹಿಸಬೇಕು ಎಂದು ಶಿರಸ್ತೇದಾರ್ ಮಾದೇಶ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿಗೃಹದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ಪ್ರತಿಯೊಬ್ಬರೂ ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ಶಿಕ್ಷಣ, ಆರೋಗ್ಯ ಹಾಗೂ ಇತರ ಸೇವೆಗಳನ್ನು ಪಡೆಯಬಹುದಾಗಿದೆ. ಜತೆಗೆ ಗೌರವ ಹಾಗೂ ಸಮಾನತೆಯಿಂದ ಸಮಾಜದಲ್ಲಿ ಜೀವಿಸುವುದು ಪ್ರತಿಯೊಬ್ಬರ ಹಕ್ಕಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಮಾನತೆಯನ್ನು ತಂದು ಕೊಡುವ ನಿಟ್ಟಿನಲ್ಲಿ ಎಲ್ಲರಿಗೂ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಮೂಲಭೂತ ಹಕ್ಕುಗಳನ್ನು ನೀಡಿದ್ದಾರೆ. ಮಾನವ ಹಕ್ಕುಗಳು ಎಲ್ಲರಿಗೂ ಅನ್ವಯಿಸುತ್ತದೆ. 1948ರಲ್ಲಿ ವಿಶ್ವಸಂಸ್ಥೆ ಅಂಗೀಕರಿಸಿದ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆ ಕಾನೂನು ದಾಖಲೆಯಾಗಿದೆ. ಪ್ರತಿಯೊಬ್ಬ ವ್ಯಕ್ತಿಯ ಘನತೆ ಹಾಗೂ ಸಮಾನತೆಯನ್ನು ಗುರುತಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಮಾನವ ಹಕ್ಕುಗಳಿಗೆ ಧಕ್ಕೆಯಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಸುರೇಖಾ, ಶಿರಸ್ತೇದಾರ್ ನಾಗೇಂದ್ರ, ಆಹಾರ ನಿರೀಕ್ಷಕ ವಿಷ್ಣುಕುಮಾರ್, ಆರ್‌ಐ ಶೇಷಣ್ಣ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಗ್ರಾಮ ಆಡಳಿತ ಅಧಿಕಾರಿಗಳಾದ ರಾಜು, ಲೋಕೇಶ್, ರಂಗಸ್ವಾಮಿ, ಹೇಮಾ, ಕಚೇರಿ ನೌಕರ ಸಿದ್ದರಾಜು, ಶೇಖರ್, ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net