ಫಲಪುಷ್ಪಗಳಿಂದ ಕಂಗೊಳಿಸದ ದೇಗುಲಗಳು

ಹನೂರಿನ ಶ್ರೀ ಕನ್ನಿಕಾ ಪರಮೇಶ್ವರಿ ದೇಗುಲದಲ್ಲಿ ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತು.
ಹನೂರಿನ ಶ್ರೀ ಕನ್ನಿಕಾ ಪರಮೇಶ್ವರಿ ದೇಗುಲದಲ್ಲಿ ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತು.
Published on
ಹನೂರು: ಪಟ್ಟಣದ ಕನ್ನಿಕಾ ಪರಮೇಶ್ವರಿ ದೇಗುಲ, ಸಿರಗೋಡಿನ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಹಾಗೂ ಬೂದುಬಾಳು ಗ್ರಾಮದ ಗುಡಿಹಟ್ಟಿ ಶ್ರೀ ವೆಂಕಟರಮಣಸ್ವಾಮಿ ದೇಗುಲದಲ್ಲಿ ಮಂಗಳವಾರ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. 
ಏಕಾದಶಿ ಅಂಗವಾಗಿ ಪಟ್ಟಣದ ಕನ್ನಿಕಾ ಪರಮೇಶ್ವರಿ ದೇಗುಲವನ್ನು ತಳಿರು-ತೋರಣ ಹಾಗೂ ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತು. ಬೆಳಗಿನ ಜಾವ ದೇವರ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿ ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕವನ್ನು ನೆರವೇರಿಸಲಾಯಿತು. ಬಳಿಕ ಸ್ವಾಮಿಗೆ ಅಷ್ಟವರ್ಧನ ಸೇವೆ, ವೈಕುಂಠ ದಾನ ಪ್ರಾಪ್ತಿ ಸೇವೆಯೊಂದಿಗೆ ಮಹಾಮಂಗಳಾರತಿ ಬೆಳಗಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ವೇಳೆ ಭಕ್ತರು ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದು, ಗೋವಿಂದ ಗೋವೀಂದಾ ಜಯಘೋಷವನ್ನು ಮೊಳಗಿಸಿದರು. ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಅರ್ಚಕ ಶ್ರೇಯಸ್ ದೀಕ್ಷಿತ್ ಪೂಜಾ ಕೈಂಕರ್ಯ ನೆರವೇರಿಸಿದರು.
ತಾಲೂಕಿನ ಬೂದುಬಾಳು ಗ್ರಾಮದ ಗುಡಿಹಟ್ಟಿ ದೇಗುಲವನ್ನು ತಳೀರು, ತೋರಣ ಹಾಗೂ ವಿವಿಧ ಪುಷ್ಪಗಳಿಂದ ಸಿಂಗರಿಸಲಾಯಿತು. ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಅರ್ಚಕರು ಸ್ವಾಮಿಗೆ ವೈಕುಂಠ ಏಕಾದಶಿ ವಿಶೇಷ ಪೂಜೆ ನೆರವೇರಿಸಲಾಯಿತು. 
ದೇಗುಲದ ವತಿಯಿಂದ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು. ಹಾಗೆಯೇ ಹನೂರು ಸಮೀಪದ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇಗುಲದಲ್ಲೂ ಸಹ ವೈಕುಂಠದ ಏಕಾದಶಿ ವಿಶೇಷ ಪೂಜೆ ನೆರವೇರಿಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದರು. ಭಕ್ತರಿಗೆ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net