ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾದ ಬಂಡಳ್ಳಿಯ ಬಡಾವಣೆಯ ಚರಂಡಿಯಲ್ಲಿ ಹೂಳು ತುಂಬಿದ್ದು, ದುರ್ನಾತ ಬೀರುತ್ತಿದೆ. ಸೊಳ್ಳೆಗಳ ಅವಾಸ ಸ್ಥಾನವಾಗಿದ್ದು, ರೋಗ ರುಜಿನದ ಭೀತಿ ಇಲ್ಲಿನ ಜನರನ್ನು ಆವರಿಸಿದೆ. ಇತ್ತ ಕುಡಿಯುವ ನೀರಿನ ತೊಂಬೆಗಳು ಪಾಚಿಗಟ್ಟಿದೆ. ಆಸುಪಾಸಿನಲ್ಲಿ ಗಿಡಗಂಟಿಗಳು ಬೆಳೆದು ನಿಂತಿದ್ದು, ಅನೈರ್ಮಲ್ಯ ನಿರ್ಮಾಣವಾಗಿದೆ. ಇದರಿಂದ ಅನೈರ್ಮಲ್ಯದ ನಡುವೆ ದಿನ ದೂಡಬೇಕಿದೆ. ಚರಂಡಿಯಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸುವಂತೆ ಹಾಗೂ ತೊಂಬೆಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಕಳೆದ ಒಂದೂವರೆ ತಿಂಗಳಿನಿಂದಲೂ ಗ್ರಾಪಂ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಜನರು ತುಂಬ ಸಮಸ್ಯೆ ಎದುರಿಸುವಂತಾಗಿದೆ. ಆದ್ದರಿಂದ ಗ್ರಾಪಂ ಅಧಿಕಾರಿಗಳು ಇನ್ನಾದರೂ ಇತ್ತ ಗಮನಹರಿಸಿ ಚರಂಡಿ ಹಾಗೂ ತೊಂಬೆಗಳನ್ನು ಸ್ವಚ್ಛಗೊಳಿಸುವಂತೆ ಗ್ರಾಮದ ಸದಾಶಿವ ಬೆಟ್ಟಪ್ಪ ಅವರು ತಮ್ಮ ಫೇಸ್‌ಬುಕ್ ಖಾತೆ ಹಾಗೂ ಇತರ ಸಾಮಾಜಿಕ ಜಾಲತಾಣದಲ್ಲಿ ದೃಶ್ಯವನ್ನು ಹರಿ ಬಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.