ಚಿಕ್ಕಲ್ಲೂರು ಜಾತ್ರೆ ಸಿದ್ಧತೆ ಮಾಹಿತಿ ಪಡೆದ ಎಸ್ಪಿ

ಜ.3 ರಿಂದ 7 ರವರೆಗೆ ನಡೆಯಲಿರುವ ತಾಲೂಕಿನ ಚಿಕ್ಕಲ್ಲೂರು ಶ್ರೀ ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ ಸಂಬಂಧ ಶುಕ್ರವಾರ ಚಿಕ್ಕಲ್ಲೂರಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ಅಧಿಕಾರಿಗಳ ಮಾತನಾಡಿದರು.
ಜ.3 ರಿಂದ 7 ರವರೆಗೆ ನಡೆಯಲಿರುವ ತಾಲೂಕಿನ ಚಿಕ್ಕಲ್ಲೂರು ಶ್ರೀ ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ ಸಂಬಂಧ ಶುಕ್ರವಾರ ಚಿಕ್ಕಲ್ಲೂರಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ಅಧಿಕಾರಿಗಳ ಮಾತನಾಡಿದರು.
Published on
ಕೊಳ್ಳೇಗಾಲ: ಜ.3 ರಿಂದ 7 ರವರೆಗೆ ನಡೆಯಲಿರುವ ತಾಲೂಕಿನ ಚಿಕ್ಕಲ್ಲೂರು ಶ್ರೀ ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ ಸಂಬಂಧ ಶುಕ್ರವಾರ ಚಿಕ್ಕಲ್ಲೂರು ಶ್ರೀ ಕ್ಷೇತ್ರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ಭೇಟಿ ನೀಡಿ, ಸಿದ್ಧತೆ ಕುರಿತು ಮಾಹಿತಿ ಪಡೆದರು.
ಶ್ರೀ ಸಿದ್ದಪ್ಪಾಜಿ ದೇವಾಲಯಕ್ಕೆ ತೆರಳಿ ಗದ್ದುಗೆಗೆ ಪೂಜೆ ಸಲ್ಲಿಸಿ ಜಾತ್ರೆ ಸಂಬಂಧ ಕೈಗೊಂಡಿರುವ ಪೂರ್ವ ಸಿದ್ಧತೆ ಕಾರ್ಯಗಳ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ಪ್ರಾಣಿ ಬಲಿ ನಿಷೇಧ ಕಾಯ್ದೆ ಜಾರಿಯಲ್ಲಿರುವುದರಿಂದ ದೇವಾಲಯ ಆವರಣದಲ್ಲಿ ಕುರಿ, ಕೋಳಿ ಬಲಿ ನೀಡುವುದನ್ನು ನಿಷೇಧಿಸಲಾಗಿದೆ. ಚೆಕ್‌ಪೊಸ್ಟ್‌ಗಳಲ್ಲಿ ಈ ಬಗ್ಗೆ ನಿಗಾ ವಹಿಸಲಾಗುತ್ತದೆ. ಜಾತ್ರಾ ಸ್ಥಳದಲ್ಲಿ ಬ್ಯಾನರ್ಸ್‌ ಮತ್ತು ಕರಪತ್ರಗಳ ಮೂಲಕ ಪ್ರಾಣಿ ಬಲಿ ನಿಷೇಧ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಜೇಬುಗಳ್ಳತನ, ಸರಗಳ್ಳತನ ತಡೆಗಟ್ಟಲು ಪ್ರತ್ಯೇಕ ಪೊಲೀಸ್ ತಂಡ ಕಾರ್ಯನಿರ್ವಹಿಸಲಿದೆ ಎಂದರು.
ಭಕ್ತರು ಸಹ ಎಚ್ಚರಿಕೆ ವಹಿಸಬೇಕಿದೆ. ಚಿಕ್ಕಲ್ಲೂರು ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ನೀಡಲಾಗುತ್ತದೆ ಎಂದರು. ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಡಿವೈಎಸ್ಪಿ ಎಂ.ಧರ್ಮೇಂದ್ರ, ವಿವಿಧ ಪೊಲೀಸ್ ಠಾಣೆಗಳ ವೃತ್ತ ನಿರೀಕ್ಷಕರು, ಸಬ್‌ಇನ್‌ಸ್ಪೆಕ್ಟರ್ಸ್‌, ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net