ಚಿರತೆ ದಾಳಿಗೆ ಹಸು ಬಲಿ

 ಮಲ್ಲಯ್ಯನಪುರದಲ್ಲಿ ಚಿರತೆ ದಾಳಿಗೆ ಮೃತಪಟ್ಟ ಹಸು.
ಮಲ್ಲಯ್ಯನಪುರದಲ್ಲಿ ಚಿರತೆ ದಾಳಿಗೆ ಮೃತಪಟ್ಟ ಹಸು.
Published on
ಹನೂರು : ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಅರಣ್ಯದಂಚಿನಲ್ಲಿ ಶನಿವಾರ ಚಿರತೆ ದಾಳಿಗೆ ಹಸುವೊಂದು ಬಲಿಯಾಗಿದೆ.
ಗ್ರಾಮದ ರಾಮಚಂದ್ರ ಎಂಬುವರು ಬೆಳಗ್ಗೆ ಹಸುಗಳನ್ನು ಅರಣ್ಯದ ಅಂಚಿನಲ್ಲಿ ಮೇಯಲು ಬಿಟ್ಟಿದ್ದರು. ಮಧ್ಯಾಹ್ನ ಅರಣ್ಯ ಪ್ರದೇಶದಿಂದ ಬಂದ ಚಿರತೆ ಹಸುವಿನ ಮೇಲೆ ದಾಳಿ ನಡೆಸಿದೆ. ಇದನ್ನು ಗಮನಿಸಿದ ಅಕ್ಕಪಕ್ಕದ ಜಮೀನಿನ ರೈತರು ಕೂಗಾಡಿದಾಗ ಚಿರತೆ ಸ್ಥಳದಿಂದ ಪರಾರಿಯಾಗಿದೆ. ಹಸು ಮೃತಪಟ್ಟಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು. ಇಲಾಖೆಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ರೈತ ರಾಮಚಂದ್ರ ಒತ್ತಾಯಿಸಿದರು. ಗ್ರಾಮಸ್ಥರು ಚಿರತೆ ಹಾವಳಿಗೆ ಕಡಿವಾಣ ಹಾಕಲು ಮನವಿ ಮಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net