ಕೃಷಿಕರಿಗೆ ಸಾಲದ ಚೆಕ್ ವಿತರಣೆ

  ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರಿಗೆ ಗಣೇಶ್ ಪ್ರಸಾದ್ ಸಾಲದ ಚೆಕ್ ವಿತರಣೆ ಮಾಡಿದರು. ಸಂಘದ ಅಧ್ಯಕ್ಷ ಬಸವರಾಜು, ಉಪಾಧ್ಯಕ್ಷ ಮಹದೇವಪ್ಪ, ನಿರ್ದೇಶಕ ಶಿವಪ್ಪ, ಮುಖ್ಯಕಾರ್ಯನಿರ್ವಾಹಕ ಮಂಜುನಾಥ ಇತರರು ಇದ್ದರು.

Published on
ಗುಂಡ್ಲುಪೇಟೆ : ಗ್ರಾಮಾಂತರ ಪ್ರದೇಶಗಳಲ್ಲಿ ಆಯ್ದ ಸಹಕಾರ ಸಂಘಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ತಾಲೂಕಿನ ಬರಗಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ 113 ಸದಸ್ಯರಿಗೆ 1 ಕೋಟಿ 51 ಲಕ್ಷ ರೂಪಾಯಿಗಳ ಸಾಲದ ಚೆಕ್ ವಿತರಣೆ ಮಾಡಿ ಅವರು ಮಾತನಾಡಿದರು. ತಾವೂ ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕರಾಗಿದ್ದು, ಉತ್ತಮ ವಹಿವಾಟು ಮಾಡುತ್ತಿರುವ ಆಯ್ದ ಸಹಕಾರ ಸಂಘಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡಲು ಮುಂದಾಗಿರುವುದಾಗಿ ತಿಳಿಸಿದರು.
ಸಹಕಾರ ಸಂಘಗಳಿಂದ ಸಾಲಪಡೆದ ರೈತರು ಸಕಾಲದಲ್ಲಿ ಮರುಪಾವತಿಸಿದರೆ ಮತ್ತಷ್ಟು ಸಾಲಸೌಲಭ್ಯಗಳನ್ನು ನೀಡಲು ಸಹಕಾರಿಯಾಗುತ್ತದೆ ಮತ್ತು ಸಂಘದ ಬೆಳವಣಿಗೆಗೂ ನೆರವಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸವರಾಜು, ಉಪಾಧ್ಯಕ್ಷ ಮಹದೇವಪ್ಪ, ನಿರ್ದೇಶಕ ಶಿವಪ್ಪ, ಮುಖ್ಯ ಕಾರ್ಯನಿರ್ವಾಹಕ ಮಂಜುನಾಥ ಸೇರಿದಂತೆ ಹಲವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net