ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಅಗತ್ಯ

ಕೊಳ್ಳೇಗಾಲದ ವಾಸವಿ ಮಹಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂ.ರಿಷಿತಾ, ಸಿಂಚನಾ ಸತೀಶ್, ತನ್ಮಯಿ ಅವರನ್ನು ಗಣ್ಯರು ಸನ್ಮಾನಿಸಿದರು. ಎ.ಆರ್.ಕೃಷ್ಣಮೂರ್ತಿ, ಎ.ಡಿ.ಕುಮಾರ ಕೃಷ್ಣ, ಪಿ.ಜಿ.ಶ್ರೀಧರ್ ಇತರರಿದ್ದರು.
ಕೊಳ್ಳೇಗಾಲದ ವಾಸವಿ ಮಹಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂ.ರಿಷಿತಾ, ಸಿಂಚನಾ ಸತೀಶ್, ತನ್ಮಯಿ ಅವರನ್ನು ಗಣ್ಯರು ಸನ್ಮಾನಿಸಿದರು. ಎ.ಆರ್.ಕೃಷ್ಣಮೂರ್ತಿ, ಎ.ಡಿ.ಕುಮಾರ ಕೃಷ್ಣ, ಪಿ.ಜಿ.ಶ್ರೀಧರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಮತ
ಕೊಳ್ಳೇಗಾಲ: ಇಲ್ಲಿನ ಶ್ರೀ ವಾಸವಿ ವಿದ್ಯಾ ಕೇಂದ್ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಾಧನೆ ಗೈದಿರುವುದು ಸಂತೋಷದ ವಿಚಾರ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಶ್ಲಾಘಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪಟ್ಟಣದ ಶ್ರೀ ವಾಸವಿ ವಿದ್ಯಾ ಕೇಂದ್ರ ವಿದ್ಯಾರ್ಥಿಗಳಿಗೆ ವಾಸವಿ ಮಹಲ್‌ನಲ್ಲಿ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾವಾರು ಫಲಿತಾಂಶ ಫಲಿತಾಂಶ ಇಳಿಕೆ ಕಂಡಿದೆ. ಆದರೆ, ಚಾಮರಾಜನಗರ ಜಿಲ್ಲೆಯ ಫಲಿತಾಂಶದಲ್ಲಿ ಕೊಳ್ಳೇಗಾಲ ಮೊದಲನೇ ಸ್ಥಾನ ಪಡೆದಿದೆ.
ವಸತಿ ಶಾಲೆಗಳ ವಿದ್ಯಾರ್ಥಿನಿಯರು ಉತ್ತಮ ಅಂಕ ಪಡೆದಿದ್ದಾರೆ. ಕೊಳ್ಳೇಗಾಲ ಶೈಕ್ಷಣಿಕ ವಲಯದಲ್ಲಿ 15 ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟ ಶಿಕ್ಷಣ ಮಕ್ಕಳಿಗೆ ಅತ್ಯಗತ್ಯವಾಗಿದೆ. ವಿದ್ಯೆ ಸಾಧಕರ ಸೊತ್ತು ವಿನಃ ಸೋಮಾರಿಗಳ ಸೊತ್ತಲ್ಲ ಎಂದರು.
ಚೆನ್ನಾಗಿ ಓದಿ ಉನ್ನತ ಸ್ಥಾನಮಾನ ಪಡೆದ ಬಳಿಕ ಹುಟ್ಟಿದ ಊರು, ಓದಿದ ಶಾಲೆಗೆ ಕೊಡುಗೆ ನೀಡಬೇಕು. ಬಡ ಮಕ್ಕಳಿಗೆ ಸಹಾಯ ಮಾಡಬೇಕು. ವಾಸವಿ ಸಂಸ್ಥೆ ಗುಣಮಟ್ಟ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಮತ್ತು ಖಾಸಗಿ ಶಾಲೆಯಲ್ಲಿ ಉತ್ತಮ ಶಿಕ್ಷಕರಿದ್ದಾರೆ. ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವುದರಿಂದ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಬೇಕು ಎಂದರು.
ಶ್ರೀ ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಎ.ಡಿ.ಕುಮಾರ ಕೃಷ್ಣ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯದ ಗಮನವನ್ನು ಕೊಳ್ಳೇಗಾಲ ತಾಲೂಕು ಸೆಳೆದಿದೆ ಎಂಬ ವಿಚಾರ ಹೆಮ್ಮೆ ಅನಿಸುತ್ತದೆ. ವಾಸವಿ ವಿದ್ಯಾ ಕೇಂದ್ರದ ಮಕ್ಕಳು ಫಲಿತಾಂಶದಲ್ಲಿ ರಾಜ್ಯಕ್ಕೆ 3, 5, 7 ನೇ ಸ್ಥಾನ ಪಡೆದಿರುವುದು ಸಂತೋಷದ ವಿಚಾರ ಎಂದರು.
ಸಾಧನೆ ಗೈದಿರುವ ವಿದ್ಯಾರ್ಥಿನಿ ಎಂ.ರಿಷಿತಾ ಸೇರಿದಂತೆ ಇತರ ವಿದ್ಯಾರ್ಥಿಗಳು ಮಾತನಾಡಿದರು. ರಾಜ್ಯಕ್ಕೆ 3 ನೇ ಸ್ಥಾನ, ಜಿಲ್ಲಾ ಮಟ್ಟದಲ್ಲಿ ಮೊದಲ ಸ್ಥಾನ ಪಡೆದಿರುವ ಎಂ.ರಿಷಿತಾ (623), ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿರುವ ಸಿಂಚನಾ ಸತೀಶ್ ( 620), ಜಿಲ್ಲೆಗೆ ನಾಲ್ಕನೆ ಸ್ಥಾನ ಪಡೆದಿರುವ ತನ್ಮಯಿ (618) ಹಾಗೂ ಶಾಲೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿಸಲಾಯಿತು.
ಶ್ರೀ ವಾಸವಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಪಿ.ಜಿ.ಶ್ರೀಧರ್, ಆರ್ಯ ವೈಶ್ಯ ಸಂಘದ ಜಿಲ್ಲಾಧ್ಯಕ್ಷ ಬಿ.ಕೆ.ಪ್ರಕಾಶ್, ಆರ್ಯ ವೈಶ್ಯ ಸಂಘದ ತಾಲೂಕು ಕಾರ್ಯದರ್ಶಿ ಪಿ.ಜಿ.ಶಶಿಧರ್, ಜೆ.ಎಸ್.ಚೇತನ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಂಜುಳಾ, ನಗರಸಭೆ ಮಾಜಿ ಸದಸ್ಯರು, ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net