ಪಟ್ಟಣದ ಘಟಕದಲ್ಲಿರುವ 140 ಬಸ್‌ಗಳು ಗ್ರಾಮಾಂತರ ಪ್ರದೇಶಗಳಲ್ಲದೆ, ಜಿಲ್ಲಾ ಕೇಂದ್ರ, ಮೈಸೂರು, ಬೆಂಗಳೂರು ಸೇರಿದಂತೆ ಪ್ರವಾಸಿ ತಾಣಗಳಾದ ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನಬೆಟ್ಟ, ಕೊಂಗಳ್ಳಿಬೆಟ್ಟ, ಧರ್ಮಸ್ಥಳ, ಹೊರನಾಡು ಹಾಗೂ ನೆರೆಯ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡುಗಳಿಗೂ ಸಂಚರಿಸುತ್ತಿವೆ. ಆದರೆ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಘಟಕದಲ್ಲಿ ಬಸ್‌ಗಳನ್ನು ಸರಿಯಾಗಿ ನಿರ್ಹವಣೆ ಮಾಡದ ಪರಿಣಾಮ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿವೆ. ಇದರಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಹೋಗಲು ಪರದಾಡುವಂತಾಗಿದೆ.