ಗುಂಡ್ಲುಪೇಟೆ: ಪಟ್ಟಣದ ಶ್ರೀ ಚಾಮುಂಡೇಶ್ವರಿ ದೇವಾಲಯದ ಬಳಿ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಿ ಸಾರ್ವಜನಿಕರಿಗೆ ಉಚಿತ ವಿತರಣೆ ಮಾಡಲಾಗುತ್ತಿದೆ.
ಭಾನುವಾರ ಬೆಳಗ್ಗೆ ಘಟಕಕ್ಕೆ ಚಾನೆ ನೀಡಿದ ಸಮಾಜದ ಮುಖಂಡರು ಮಾತನಾಡಿ, ಪ್ರತಿದಿನ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಾರ್ವಜನಿಕರು ಉಚಿತವಾಗಿ ಶುದ್ಧ ನೀರನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ನಾಗೇಶ್, ಭಾವಸಾರ್ ಕ್ಷತ್ರಿಯ ಸಮಾಜದ ಉಪಾಧ್ಯಕ್ಷ ಮೋಹನ್‌ರಾವ್ ನಾಯಕ್, ಪ್ರಧಾನ ಕಾರ್ಯದರ್ಶಿ ಎಂ.ಶಿವಕುಮಾರ್ ಅಷ್ಟಕರ್, ಖಜಾಂಚಿ ವಿಶ್ವನಾಥರಾವ್ ಪತಂಗೆ, ಮುಖಂಡರಾದ ನವೀನ್ ವಾದೋನ್ನೆ, ವಿ.ಎಸ್.ಶಂಕರರಾವ್ ವಾದೋನ್ನೆ ಇದ್ದರು.