ಸಂಘದ ಸದಸ್ಯರ ಹಿತಾಸಕ್ತಿಗೆ ಆದ್ಯತೆ

ಗುಂಡ್ಲುಪೇಟೆ ಪಟ್ಟಣದ ಚಾಮುಲ್ ಉಪಕಚೇರಿಯಲ್ಲಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಹಾಗೂ ಚಾಮುಲ್ ರೈತ ಕಲ್ಯಾಣ ಟ್ರಸ್ಟ್ ವತಿಯಿಂದ ಮೃತ ಕುಟುಂಬಗಳ ವಾರಸುದಾರರಿಗೆ ಪರಿಹಾರದ ಚೆಕ್ ವಿತರಿಸಲಾಯಿತು. ಎಚ್.ಎಸ್.ನಂಜುಂಡ ಪ್ರಸಾದ್, ಎಂ.ಪಿ.ಸುನೀಲ್, ಮಹೇಂದ್ರ, ಪ್ರಕಾಶ್ ಇದ್ದರು.
ಗುಂಡ್ಲುಪೇಟೆ ಪಟ್ಟಣದ ಚಾಮುಲ್ ಉಪಕಚೇರಿಯಲ್ಲಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಹಾಗೂ ಚಾಮುಲ್ ರೈತ ಕಲ್ಯಾಣ ಟ್ರಸ್ಟ್ ವತಿಯಿಂದ ಮೃತ ಕುಟುಂಬಗಳ ವಾರಸುದಾರರಿಗೆ ಪರಿಹಾರದ ಚೆಕ್ ವಿತರಿಸಲಾಯಿತು. ಎಚ್.ಎಸ್.ನಂಜುಂಡ ಪ್ರಸಾದ್, ಎಂ.ಪಿ.ಸುನೀಲ್, ಮಹೇಂದ್ರ, ಪ್ರಕಾಶ್ ಇದ್ದರು.
Published on
ಗುಂಡ್ಲುಪೇಟೆ: ಹಾಲು ಒಕ್ಕೂಟವು ಸದಸ್ಯರಿಗೆ ಹಲವು ಸವಲತ್ತುಗಳನ್ನು ನೀಡುತ್ತಿದ್ದು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಚಾಮುಲ್ ನಿರ್ದೇಶಕ ಹಾಗೂ ಚಾಮರಾಜನಗರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಂ.ನಂಜುಂಡ ಪ್ರಸಾದ್ ಹೇಳಿದರು.
ಪಟ್ಟಣದ ಚಾಮುಲ್ ಉಪಕಚೇರಿಯಲ್ಲಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಹಾಗೂ ಚಾಮುಲ್ ರೈತ ಕಲ್ಯಾಣ ಟ್ರಸ್ಟ್ ವತಿಯಿಂದ ಹಾಲು ಉತ್ಪಾದಕರ ಸಂಘದ ಮೃತ ಸದಸ್ಯರ ಕುಟುಂಬದ ವಾರಸುದಾರರಿಗೆ ಪರಿಹಾರ ಚೆಕ್ ವಿತರಿಸಿ ಅವರು ಮಾತನಾಡಿದರು. ಖಾಸಗಿ ಡೇರಿಗಳು ಹಣಗಳಿಸುವ ಉದ್ದೇಶದಿಂದ ಕೆಲಸ ಮಾಡಿದರೆ ಒಕ್ಕೂಟವು ತನ್ನ ಸದಸ್ಯರ ಹಿತಾಸಕ್ತಿಗೆ ಪೂರಕವಾಗಿದೆ. ಕಳೆದ ಬಾರಿ ಮರಣ ಹೊಂದಿದ ಹಾಲು ಉತ್ಪಾದಕರ ಸಹಕಾರ ಸಂಘಗಳ 61 ಸದಸ್ಯರ ವಾರಸುದಾರರಿಗೆ ಒಕ್ಕೂಟದ ವತಿಯಿಂದ ತಲಾ 15 ಸಾವಿರ ರೂ.ಪರಿಹಾರ ನೀಡಲಾಗುತ್ತಿದೆ. 58 ವರ್ಷ ಒಳಪಟ್ಟ ಸದಸ್ಯರಿಗೆ ಸಂಘಗಳಲ್ಲಿ 1ಲಕ್ಷದವರೆಗೆ ವಿಮೆ ಸೌಲಭ್ಯ ಲಭ್ಯವಿದೆ. ರಾಸುಗಳಿಗೆ ತುರ್ತು ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ ಇದೆ ಎಂದು ತಿಳಿಸಿದರು.
ಚಾಮುಲ್ ನಿರ್ದೇಶಕ ಎಂ.ಪಿ. ಸುನೀಲ್ ಮಾತನಾಡಿ ಸಹಕಾರ ಸಂಘಗಳು ಸದಸ್ಯರ ಸಂಸ್ಥೆಗಳಾಗಿದ್ದು ಇಲ್ಲಿ ಸಿಗುವ ಸೌಲಭ್ಯಗಳು ಖಾಸಗಿ ಡೇರಿಗಳಲ್ಲಿ ಸಿಗುವುದಿಲ್ಲ. ಖಾಸಗಿಯವರ ಅಮಿಷಗಳಿಗೆ ಒಳಗಾಗದೆ ಸಹಕಾರ ಸಂಘಕ್ಕೆ ಹಾಲು ಸರಬರಾಜು ಮಾಡುವುದರಿಂದ ಸವಲತ್ತುಗಳನ್ನು ಪಡೆಯಬಹುದು. ಸಹಕಾರ ಸಂಘದಲ್ಲಿ ರೈತರ ರಾಸುಗಳಿಗೆ ಎರಡು ವರ್ಷಗಳ ಅವಧಿಗೆ ವಿಮೆ ಸೌಲಭ್ಯ ಒದಗಿಸಲಾಗುತ್ತಿದ್ದು ಸದಸ್ಯರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ವಿಸ್ತರಣಾಧಿಕಾರಿಗಳಾದ ಎಚ್.ಪ್ರಕಾಶ್, ಸಿದ್ದಲಿಂಗೇಶ್, ರಂಜಿತಾ, ಮುದ್ದಪ್ಪ, ಉದಯ್, ಮಂಜೇಶ್, ಕಾರ್ಯದರ್ಶಿ ಅಗತಗೌಡನಹಳ್ಳಿ ಮಹೇಂದ್ರ, ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಫಲಾನುಭವಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net