ವಿದ್ಯಾರ್ಥಿಗಳಿಗೆ ನಿರಂತರ ಅಧ್ಯಯನ ಅತ್ಯಗತ್ಯ

ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಾಗಾರವನ್ನು ಹಿರಿಯ ನ್ಯಾಯಾಧೀಶ ಈಶ್ವರ್ ಉದ್ಘಾಟಿಸಿದರು. ಟಿ. ಜವರೇಗೌಡ, ಡಾ.ಚಿದಂಬರ, ಎನ್.ವಿಶ್ವನಾಥ್, ಲಿಂಗರಾಜು, ರಾಕೇಶ್ ಅಕುಲ್, ಮಹದೇವಪ್ಪ ಇನ್ನಿತರರಿದ್ದರು.
ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಾಗಾರವನ್ನು ಹಿರಿಯ ನ್ಯಾಯಾಧೀಶ ಈಶ್ವರ್ ಉದ್ಘಾಟಿಸಿದರು. ಟಿ. ಜವರೇಗೌಡ, ಡಾ.ಚಿದಂಬರ, ಎನ್.ವಿಶ್ವನಾಥ್, ಲಿಂಗರಾಜು, ರಾಕೇಶ್ ಅಕುಲ್, ಮಹದೇವಪ್ಪ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಸಲಹೆ
  • ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಾಗಾರ
  • ಹಾಸ್ಟೆಲ್ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಆಗ್ರಹ
ಚಾಮರಾಜನಗರ: ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾಧನೆ ಮಾಡಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಈಶ್ವರ ಹೇಳಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವೃತ್ತಿಮಾರ್ಗದರ್ಶನ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣದ ಮೇಲೆ ಹೆಚ್ಚಿನ ಗಮನ ಹರಿಸಬೇಕು. ಪಿಯುಸಿ, ಪದವಿಯಲ್ಲಿ ಉತ್ತಮ ಅಂಕಗಳನ್ನು ಪಡೆದರೆ ಅದೇ ಸಾಕಾಗದು. ಅದಕ್ಕೆ ತಕ್ಕ ಉದ್ಯೋಗವನ್ನು ಪಡೆಯಲು ತ್ವರಿತವಾಗಿ ತಯಾರಿ ನಡೆಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಂದಿನಿಂದಲೇ ತಯಾರಿನಡೆಸಿ, ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ನಿರಂತರ ಅಧ್ಯಯನ ಮಾಡಿದರೇ ಯಶಸ್ಸು ತಾನಾಗಿಯೇ ಸಿಗುತ್ತದೆ ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಸಮಯವನ್ನು ಸಮರ್ಪಕವಾಗಿ ಯೋಜಿಸಿ, ದಿನನಿತ್ಯದ ಅಧ್ಯಯನವನ್ನು ನಿಯಮಿತವಾಗಿ ಮುಂದುವರಿಸಬೇಕು. ಕಷ್ಟವನ್ನು ಎದುರಿಸುವ ಧೈರ್ಯ ವಹಿಸಿ, ನಿರಂತರ ಪ್ರಯತ್ನದಿಂದಲೇ ಯಶಸ್ಸು ಸಿಗುತ್ತದೆ. ಓದು ಮತ್ತು ಅಭ್ಯಾಸವನ್ನು ಜೀವನಶೈಲಿಯಾಗಿ ಮಾಡಿಕೊಂಡರೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ನೀವು ಸಾಧನೆ ಮಾಡಬಹುದಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಮಾತನಾಡಿ, ಬಡ ಮಕ್ಕಳು ಹಾಸ್ಟೆಲ್‌ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಇಲಾಖೆಯ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ಯಶಸ್ಸು ಸಾಧಿಸಬೇಕು. ತಮ್ಮ ಆಲೋಚನೆಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ. ಉತ್ತಮ ಸ್ನೇಹಿತರೊಂದಿಗೆ ಸಹವಾಸ ಮಾಡಿ, ಸ್ಪರ್ಧಾತ್ಮಕ ಮತ್ತು ವೃತ್ತಿಪರ ಉದ್ದೇಶಗಳೊಂದಿಗೆ ಮುನ್ನಡೆದಾಗ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎನ್.ವಿಶ್ವನಾಥ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗರಾಜು, ಎಸ್‌ಬಿಐ ನಿರ್ದೇಶಕ ರಾಕೇಶ್ ಅಕುಲ್, ಪಿಎಲ್ಐ ಅಭಿವೃದ್ಧಿ ಅಧಿಕಾರಿ ಮಹದೇವಪ್ಪ, ಭೀಮನಬೀಡು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನಂದೀಶ್ ಹಾಗೂ ಇತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net