ಗ್ರಾಮದ ನಂಜಪ್ಪ ಅವರ ಹಸು ತೀವ್ರವಾಗಿ ಗಾಯಗೊಂಡಿದೆ. ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದನ್ನು ಅರಿಯದೆ ಹಸು ತಿನ್ನಲು ಯತ್ನಿಸಿದಾಗ ಸಿಡಿಮದ್ದು ಸ್ಫೋಟಗೊಂಡು ಅದರ ಬಾಯಿ ಛಿದ್ರಗೊಂಡಿದೆ. ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಹಸುವಿನ ನರಳಾಟ ಮನಕಲುಕಿಸುವಂತಿದೆ. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ರೈತನಿಗೆ ಸೂಕ್ತ ಪರಿಹಾರ ಕೊಡಬೇಕೆಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.