ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಪ್ರಸಕ್ತ ಸಾಲಿಗೆ ನೂತನವಾಗಿ ಆಯ್ಕೆಯಾಗಿರುವ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಬೆಂಗಳೂರು ಔಟ್ಲಾಡ್ ಇಂಡಿಯಾ ಫೌಂಡೇಶನ್‍ನ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುತ್ತಿದೆ. ಬಡವರು, ದುರ್ಬಲರು, ನಿರ್ಗತಿಕರು, ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳು ಸೇರಿದಂತೆ ಸಮಾಜದ ಎಲ್ಲರಿಗೂ ಹೊಸ ಹಾಗೂ ತಿದ್ದುಪಡಿಯಾಗುವ ಕಾನೂನುಗಳ ಮಾಹಿತಿ ಅಗತ್ಯವಿದೆ. ಅರೆಕಾಲಿಕ ಕಾನೂನು ಸ್ವಯಂ ಸೇವಕರ ಜ್ಞಾನ, ತಿಳಿವಳಿಕೆಯನ್ನು ನವೀಕರಿಸುವುದು, ಭವಿಷ್ಯದಲ್ಲಿ ಎದುರಾಗುವ ಸವಾಲುಗಳನ್ನು ಪರಿಹರಿಸಿಕೊಳ್ಳಲು ಈ ತರಬೇತಿಯು ನೆರವಾಗಲಿದೆ ಎಂದರು.