ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಲು ಡಿಸಿಎಂಗೆ ಆಹ್ವಾನ

ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ತಾಲೂಕಿನ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಲು ಆಹ್ವಾನಿಸಿದರು.
ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ತಾಲೂಕಿನ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಲು ಆಹ್ವಾನಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆ
ಗುಂಡ್ಲುಪೇಟೆ : ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಗುರುವಾರ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಆಹ್ವಾನಿಸಿದರು. 
ಸದ್ಯ ಚಾಲ್ತಿಯಲ್ಲಿರುವ ಆಲಂಬೂರು ಏತನೀರಾವರಿ ಯೋಜನೆಯಲ್ಲಿ ಗುಂಡ್ಲುಪೇಟೆ ತಾಲೂಕಿನ 4 ನೇ ಹಂತದ ಕೆರೆಗಳು ಹಾಗೂ ಚಾಮರಾಜನಗರ ತಾಲೂಕಿನ ಕೆರೆಗಳಿಗೂ ನೀರು ತುಂಬಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಾಲೂಕಿನ 4 ನೇ ಹಂತದ ಕೆರೆಗಳಿಗೆ ಪೈಪ್ ಲೈನ್ ಮಾಡಿದರೆ ಎರಡೂ ತಾಲೂಕುಗಳ ಕೆರೆಗಳಿಗೂ ನೀರು ತುಂಬಿಸಬಹುದು. ಆದ್ದರಿಂದ ಪೈಪ್ ಲೈನ್ ಕಾಮಗಾರಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net