ವಾಹನ ಡಿಕ್ಕಿಯಾಗಿ ಜಿಂಕೆಗೆ ಗಾಯ

ತಾಳುಬೆಟ್ಟದ ಬಳಿ ಅಚರಿಚಿತ ವಾಹನ ಡಿಕ್ಕಿಯಿಂದ ಗಾಯಗೊಂಡ ಜಿಂಕೆ.
ತಾಳುಬೆಟ್ಟದ ಬಳಿ ಅಚರಿಚಿತ ವಾಹನ ಡಿಕ್ಕಿಯಿಂದ ಗಾಯಗೊಂಡ ಜಿಂಕೆ.
Published on
ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ತಾಳುಬೆಟ್ಟದ ಬಳಿ ಶುಕ್ರವಾರ ರಾತ್ರಿ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಗಾಯಗೊಂಡಿದ್ದು, ಚಿಕಿತ್ಸೆ ನೀಡುವಂತೆ ಪ್ರಾಣಿಪ್ರಿಯರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಈ ಮಾರ್ಗದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಗಾಯಗೊಂಡು ತೆರಳಲು ಸಾಧ್ಯವಾಗದೆ ರಸ್ತೆ ಬದಿಯಲ್ಲಿ ಕುಂಟುತ್ತಾ ಸಾಗುತ್ತಿತ್ತು. ಇದನ್ನು ಗಮನಿಸಿದ ವಾಹನ ಸವಾರರು ಜಿಂಕೆಗೆ ಪ್ರಥಮ ಚಿಕಿತ್ಸೆ ನೀಡಲು ಮುಂದಾದರು. ಆದರೆ, ಜಿಂಕೆ ಸ್ಪಂದಿಸದೆ ಅರಣ್ಯದೊಳಗೆ ಕುಂಟುತ್ತಲೇ ಸಾಗಿತು. ಈ ದೃಶ್ಯವನ್ನು ಸಾರ್ವಜನಿಕರೊಬ್ಬರೂ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ವಾಹನ ಸವಾರರು ವನ್ಯಜೀವಿಗಳ ಹಿತ ದೃಷ್ಟಿಯಿಂದ ನಿಧಾನವಾಗಿ ತೆರಳುವಂತೆ ಮನವಿ ಮಾಡಿದ್ದಾರೆ. ಹಾಗೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆಯನ್ನು ಪತ್ತೆಹಚ್ಚಿ ಅಗತ್ಯ ಚಿಕಿತ್ಸೆ ನೀಡುವಂತೆ ಕೋರಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net